ಬೆಂಗಳೂರು: ರಾಜ್ಯದಲ್ಲಿ ದಿನ ಕ್ರಮೇಣ ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿದ್ದು ಇಂದು 25,311 ಜನರಿಗೆ ಸೋಂಕು ದೃಢಪಟ್ಟಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 24,50,215ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 529 ಮಂದಿ ಕೊರೋನಾಗೆ ಬಲಿಯಾಗಿದ್ದು ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25,811ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 5,701 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,25,253ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 297 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿದ್ದು ಇಂದು ಬರೋಬ್ಬರಿ 57,333 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಆ ಮೂಲಕ ಚೇತರಿಕೆ ಸಂಖ್ಯೆ 19,83,948ಕ್ಕೆ ಏರಿಕೆಯಾಗಿದೆ.