ಸಂಗ್ರಹ ಚಿತ್ರ 
ರಾಜ್ಯ

ಮಗನ ಅಂತ್ಯಕ್ರಿಯೆ ವೇಳೆ ಕೊರೋನಾ ಸೋಂಕು ಪೀಡಿತ ತಂದೆ ಸಾವು!

ಮಗನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಕೋವಿಡ್-19 ಸೋಂಕು ಪೀಡಿತ ತಂದೆ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಕೊಡಗಿನಲ್ಲಿ ವರದಿಯಾಗಿದೆ.

ಮಡಿಕೇರಿ: ಮಗನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಕೋವಿಡ್-19 ಸೋಂಕು ಪೀಡಿತ ತಂದೆ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಕೊಡಗಿನಲ್ಲಿ ವರದಿಯಾಗಿದೆ.

ಕೊಡಗಿನ ಗೋಣಿಕೊಪ್ಪದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಸಾವಿಗೀಡಾಗಿದ್ದ ವಿಕತಚೇತನ ಮಗನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ತಂದೆ ರಾಜನ್ (70ವರ್ಷ) ಕೂಡ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೀಡಾಗಿದ್ದ 37 ವರ್ಷದ ವಿಕಲಚೇತನ ಸಜೇಶ್ ನನ್ನು ಗೋಣಿಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದ. ಭಾನುವಾರ ಅಂತ್ಯಕ್ರಿಯೆ ನಡೆದಿತ್ತು. ಆದರೆ ಈ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ತಂದೆ ರಾಜನ್ ಇದ್ದಕ್ಕಿದ್ದ ಹಾಗೇ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆ ಸಾಗಿಸಲು ಪ್ರಯತ್ನಿಸಲಾಯಿತಾದರೂ ಅವರು ಮಾರ್ಗ ಮಧ್ಯೆ ಸಾವನ್ನಪ್ಪಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ತಂದು ಕೋವಿಡ್ ಪರೀಕ್ಷೆ ನಡೆಸಿದಾಗ ಅವರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. 

ಅಂತೆಯೇ ರಾಜನ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇದೀಗ ರಾಜನ್ ಅವರ ಅಂತ್ಯಕ್ರಿಯೆಯನ್ನು ಕೋವಿಡ್ ಮಾರ್ಗಸೂಚಿ ನಿರ್ಬಂಧಗಳೊಂದಿಗೆ ನೆರವೇರಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!