ಗಾಲಿ ಜನಾರ್ಧನ ರೆಡ್ಡಿ 
ರಾಜ್ಯ

ಬಳ್ಳಾರಿ ಭೇಟಿಗೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಮನವಿ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ಪಡೆಯುವಾಗ ತಮ್ಮ ಊರಾದ ಬಳ್ಳಾರಿಗೆ ಹೋಗದಂತೆ ವಿಧಿಸಲಾದ ನಿಷೇಧ ತೆರವುಗೊಳಿಸುವಂತೆ ಮಾಜಿ ಸಚಿವ ಮತ್ತು ಗಣಿ ಉದ್ಯಮಿ ಗಾಲಿ ಜನಾರ್ಧನ ರೆಡ್ಡಿ ಅವರ ಮನವಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಗೆ ಸೂಚಿಸಿದೆ.

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ಪಡೆಯುವಾಗ ತಮ್ಮ ಊರಾದ ಬಳ್ಳಾರಿಗೆ ಹೋಗದಂತೆ ವಿಧಿಸಲಾದ ನಿಷೇಧ ತೆರವುಗೊಳಿಸುವಂತೆ ಮಾಜಿ ಸಚಿವ ಮತ್ತು ಗಣಿ ಉದ್ಯಮಿ ಗಾಲಿ ಜನಾರ್ಧನ ರೆಡ್ಡಿ ಅವರ ಮನವಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಗೆ ಸೂಚಿಸಿದೆ.

ಬಹು ಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ ರೆಡ್ಡಿ ಅವರು 2015 ರಿಂದ ಜಾಮೀನಿನ ಮೇಲೆ ಜೈಲಿಂದ ಹೊರಗಿದ್ದಾರೆ. ಆದರೆ ಅವರಿಗೆ ಬಳ್ಳಾರಿಗೆ ಭೇಟಿ ಕೊಡುವುದನ್ನು ಹಾಗೇ ಆಂಧ್ರಪ್ರದೇಶದ ಅನಂತಪುರ ಮತ್ತು ಕಡಪಾ ಭೇಟಿಗೆ ನಿಷೇಧಿಸುವುದು ಸೇರಿದಂತೆ ಹಲವು ಷರತ್ತುಗಳನ್ನು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ವಿಧಿಸಿದೆ.

ಅಶೋಕ್ ಭೂಷಣ್ ಮತ್ತು ಎಂ ಆರ್ ಶಾ ಅವರನ್ನೊಳಗೊಂಡ ರಜಾ ಕಾಲದ ಪೀಠವು ರೆಡ್ಡಿ ಬಳ್ಳಾರಿಗೆ ಭೇಟಿ ಮಾಡಲು ಅನುಮತಿ ಕೋರಿದ ಮನವಿಯನ್ನು ವಿಚಾರಣೆಗೆ ಸಮ್ಮತಿಸಿದೆ.ಮುಂದಿನ ವಾರ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರ ಮತ್ತೊಂದು ನ್ಯಾಯಪೀಠದ ಮುಂದೆ ಪಟ್ಟಿ ಮಾಡಲಾಗುತ್ತದೆ ಎಂದು ಹೇಳಿದೆ.

ಏಪ್ರಿಲ್ 5 ರಂದು, ನ್ಯಾಯಮೂರ್ತಿಗಳಾದ ಭೂಷಣ್ ಮತ್ತು ಆರ್ ಸುಭಾಷ್ ರೆಡ್ಡಿ ಅವರನ್ನೊಳಗೊಂಡ ನ್ಯಾಯಪೀಠವು 2015 ರಲ್ಲಿ ಸುಪ್ರೀಂ ಕೋರ್ಟ್ ವಿಧಿಸಿದ್ದ ಜಾಮೀನು ಷರತ್ತುಗಳನ್ನು ಮಾರ್ಪಡಿಸಬೇಕೆಂದು ಕೋರಿ ರೆಡ್ಡಿ ಸಲ್ಲಿಸಿದ್ದ ಮನವಿ ತೀರ್ಪನ್ನು ಕಾಯ್ದಿರಿಸಿತ್ತು.

ವಿಚಾರಣೆಯ ದಿನಾಂಕವನ್ನು ಸಿಜೆಐ ಅವರಿರುವ ನ್ಯಾಯಪೀಠ ತೀರ್ಮಾನಿಸಲಿದೆ. ಹೆಚ್ಚುವರಿ ಸಾಲಿಸಿಟರ್ ಜನರಲ್ ಮಾಧವಿ ದಿವಾನ್ ಸಿಬಿಐ ನ ಪ್ರತಿನಿಧಿಯಾಗಿದ್ದರೆ ರೆಡ್ಡಿ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಇದ್ದರು.

ಈ ಹಿಂದೆ, ರೆಡ್ಡಿ ಅವರು ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಲು ಅವಕಾಶ ನೀಡಬೇಕೆಂದಾಗ ಸಿಬಿಐ ವಿರೋಧಿಸಿತ್ತು, ಏಕೆಂದರೆ ಅವರು ಸಾಕಷ್ಟು ಪ್ರಭಾವವನ್ನು ಹೊಂದಿದ್ದಾರೆ ಮತ್ತು ತನಿಖೆಯಲ್ಲಿ ಹಸ್ತಕ್ಷೇಪ ಮಾಡಬಹುದು ಎಂದು ಅದು ವಾದಿಸಿದೆ. ಮೂರು ವರ್ಷಗಳಿಗಿಂತ ಹೆಚ್ಚು ಜೈಲಿನಲ್ಲಿದ್ದ ರೆಡ್ಡಿ ಅವರಿಗೆ 2015 ರ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತು.

ರೆಡ್ಡಿ ಹಾಗೂ ಅವರ ಸೋದರ ಮಾವ ಬಿ ವಿ ಶ್ರೀನಿವಾಸ್ ರೆಡ್ಡಿ ಅವರನ್ನು ಒಬಳಾಪುರಂ ಮೈನಿಂಗ್ ಕಂಪನಿ ಅವ್ಯವಹಾರ ಕೇಸ್ ನಲ್ಲಿ 2011 ರ ಸೆಪ್ಟೆಂಬರ್ 5 ರಂದು ಸಿಬಿಐ ಬಳ್ಳಾರಿಯಿಂದ ಬಂಧಿಸಿ ಹೈದರಾಬಾದ್‌ಗೆ ಕರೆತಂದರು. ಗಣಿಗಾರಿಕೆ ಗುತ್ತಿಗೆ ಮಾರ್ಕ್ ಗಳ ಬದಲಾವಣೆ, ಬಳ್ಳಾರಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದೆ ಎಂದು ಅವರ ವಿರುದ್ಧ ಆರೋಪ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT