ರಾಜ್ಯ

ರಾಜ್ಯದಲ್ಲಿ ಸೋಂಕು ಇಳಿಕೆ, ಸಾವು ಹೆಚ್ಚಳ: ಇಂದು ಕೊರೋನಾಗೆ 588 ಬಲಿ, 22,758 ಮಂದಿಗೆ ಪಾಸಿಟಿವ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾದರೂ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಮಂಗಳವಾರ ಒಂದೇ ದಿನ ಬರೋಬ್ಬರಿ 588 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 26399ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 22758 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 24,72,973ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 6,243 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,31,496ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 350 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 38224 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 20,22,172ಕ್ಕೆ ಏರಿಕೆಯಾಗಿದೆ. ಇನ್ನು 4,24,381 ಸಕ್ರೀಯ ಪ್ರಕರಣಗಳಿವೆ.

SCROLL FOR NEXT