ಸುಧಾಕರ್ 
ರಾಜ್ಯ

ಕೇಂದ್ರದಿಂದ ರಾಜ್ಯಕ್ಕೆ 1.25 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆ ಬಂದಿದೆ: ಸಚಿವ ಸುಧಾಕರ್

ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ 1.25 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆ ಕರ್ನಾಟಕಕ್ಕೆ ಬಂದಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ 1.25 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆ ಕರ್ನಾಟಕಕ್ಕೆ ಬಂದಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ಮಂಗಳವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ ಇಂದು 1.25 ಲಕ್ಷ ಡೋಸ್ ಕೋವ್ಯಾಕ್ಸಿನ್ ಕರ್ನಾಟಕಕ್ಕೆ ಬಂದಿದೆ. ಕೇಂದ್ರದಿಂದ ಪಡೆದ ಒಟ್ಟು ಕೋವ್ಯಾಕ್ಸಿನ್ ಡೋಸ್ 12,91,280  ರಾಜ್ಯವು ನೇರವಾಗಿ ಖರೀದಿಸಿದ ಒಟ್ಟು ಕೋವ್ಯಾಕ್ಸಿನ್ ಡೋಸ್ 1,44,170 ಎಂದು ತಿಳಿಸಿದ್ದಾರೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 19,85,38,999 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!