ಕೋವಿಡ್ ಕೇರ್ ಸೆಂಟರ್ ನಲ್ಲಿ ಸಂಗೀತ ರಸಸಂಜೆ ಕಾರ್ಯಕ್ರಮದಲ್ಲಿ ಎಂ ಪಿ ರೇಣುಕಾಚಾರ್ಯ 
ರಾಜ್ಯ

ಲಕ್ಷಣರಹಿತ ಕೊರೋನಾ ಸೋಂಕಿತರೊಂದಿಗೆ ಸಂಗೀತ ರಸಸಂಜೆಯಲ್ಲಿ ಶಾಸಕ ರೇಣುಕಾಚಾರ್ಯ ಭರ್ಜರಿ ಸ್ಟೆಪ್ಸ್!

ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಕೊರೋನಾ ವಿಚಾರದಲ್ಲಿ ಬಹಳ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಹೊನ್ನಾಳಿ: ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಕೊರೋನಾ ವಿಚಾರದಲ್ಲಿ ಬಹಳ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಆಸ್ಪತ್ರೆಗಳಿಗೆ ಆಕ್ಸಿಜನ್ ಸಿಲಿಂಡರ್ ಗಳ ವಿತರಣೆ, ಕೊರೋನಾ ರೋಗಿಗಳಿಗೆ ಆಹಾರ ವಿತರಣೆ, ಮಾಸ್ಕ್, ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ಆಹಾರ ಕಿಟ್ ವಿತರಣೆ ಹೀಗೆ ಹಲವು ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ಮಧ್ಯೆ ಹೊನ್ನಾಳಿಯ ಕೋವಿಡ್ ಕೇರ್ ಸೆಂಟರ್ ನಲ್ಲಿ ಕೊರೋನಾ ಲಕ್ಷಣ ರಹಿತ ಸೋಂಕಿತರು ಕ್ವಾರಂಟೈನ್ ನಲ್ಲಿರುವಲ್ಲಿ ಸಂಗೀತ ರಸಸಂಜೆಯನ್ನು ಏರ್ಪಡಿಸಿದ್ದರು. ಅಲ್ಲಿ ಕ್ವಾರಂಟೈನ್ ನಲ್ಲಿರುವವರ ಮನಸ್ಸಿಗೆ ಮುದ ನೀಡಿ ಅವರಿಗೆ ಖುಷಿಪಡಿಸುವುದು ಉದ್ದೇಶವಾಗಿತ್ತು.

ಇಲ್ಲಿ ಸ್ವತಃ ರೇಣುಕಾಚಾರ್ಯ ಅವರೇ ಕನ್ನಡದ ಹಳೆಯ ಚಿತ್ರಗೀತೆಗಳಿಗೆ ಸೋಂಕಿತರ ಜೊತೆ ಕುಣಿದು ಸಂತೋಷಪಡುವುದಲ್ಲದೆ ಬೇರೆಯವರನ್ನು ಕೂಡ ಖುಷಿಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ