ಡಿಸಿಎಂ ಡಾ. ಸಿ.ಎನ್. ಅಶ್ವತ್ಥ ನಾರಾಯಣ 
ರಾಜ್ಯ

ಕೋವಿಡ್-19 ಮೂರನೇ ಅಲೆ: ಮುಂಜಾಗ್ರತಾ ಕ್ರಮವಾಗಿ ಉನ್ನತ ಮಟ್ಟದ ತಜ್ಞರ ಸಮಿತಿ ರಚನೆ- ಅಶ್ವತ್ಥ ನಾರಾಯಣ

ರಾಜ್ಯದಲ್ಲಿ ಮುಂಜಾಗ್ರತಾ ಕ್ರಮವಾಗಿ ಕೋವಿಡ್-19 ಮೂರನೇ ಅಲೆಯನ್ನು ತಡೆಗಟ್ಟಲು ಉನ್ನತ ಮಟ್ಟದ ನುರಿತ ವೈದ್ಯರ, ತಜ್ಞರ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮುಂಜಾಗ್ರತಾ ಕ್ರಮವಾಗಿ ಕೋವಿಡ್-19 ಮೂರನೇ ಅಲೆಯನ್ನು ತಡೆಗಟ್ಟಲು ಉನ್ನತ ಮಟ್ಟದ ನುರಿತ ವೈದ್ಯರ, ತಜ್ಞರ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ, ನಾರಾಯಣ ಹೃದಯಾಲಯದ ಹೃದ್ರೋಗ ತಜ್ಞ ಡಾ. ದೇವಿ ಪ್ರಸಾದ್ ಶೆಟ್ಟಿ ಅಧ್ಯಕ್ಷತೆಯ ಈ ಸಮಿತಿಯಲ್ಲಿ ನಿಮ್ಹಾನ್ಸ್ ನಿರ್ದೇಶಕ ಡಾ. ಸತೀಶ್ ಗಿರಿಮಾಜಿ, ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ ಪ್ರಾಧ್ಯಾಪಕ ಡಾ. ಬಸವರಾಜ್ ಜಿ.ವಿ.ಡಬ್ಲ್ಯೂಎಚ್ ಒ ಪ್ರಾದೇಶಿಕ ತಂಡದ ನಾಯಕ ಡಾ. ಆಶಿಶ್ ಸಥಪತಿ, ಅಂಕಾಲಾಜಿಸ್ಟ್ ಡಾ. ಅಜಯ್ ಕುಮಾರ್, ಪಿಡಿಯಾಟ್ರಿಶಿಯನ್ ಡಾ. ಅರವಿಂದ್ ಶೆಣೈ, ಸಾಗರ್ ಆಸ್ಪತ್ರೆಯ ಡಾ. ರಘುನಾಥ್ ಯು, ಸೇರಿದಂತೆ 12 ಮಂದಿ ಸದಸ್ಯರು ಈ ಸಮಿತಿಯಲ್ಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕೊರೋನಾ ಎರಡನೇ ಅಲೆಯ ನಿರ್ವಹಣೆ ಜೊತೆಗೆ ಮಕ್ಕಳ ಆರೋಗ್ಯ ಸೇರಿದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳ ರೂಪುರೇಷೆ, ಸಿದ್ಧತೆ, ಅನುಷ್ಠಾನಕ್ಕೆ ಸರ್ಕಾರ ಸಮನ್ವಯದಿಂದ ಕಾರ್ಯನಿರ್ವಹಿಸಲಿದೆ ಎಂದು ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

ಬಿಹಾರದ ಯುವಕನ ಜೊತೆ ಪ್ರೀತಿ, ಮದುವೆಗೆ ಸಿದ್ಧತೆ; ತಾಯಿ ಸಲಹೆ ಬೆನ್ನಲ್ಲೇ ನಿರ್ಧಾರ ಬದಲಿಸಿದ ಬೆಂಗಳೂರು ಟೆಕ್ಕಿ.. ಆಗಿದ್ದೇನು?

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video