ವಿಜಯೇಂದ್ರ 
ರಾಜ್ಯ

ಲಾಕ್ ಡೌನ್ ನಿಯಮ ಉಲ್ಲಂಘಿಸಿದ ವಿಜಯೇಂದ್ರ ವಿರುದ್ಧ ಕ್ರಮ ಏನು?: ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ನಂಜನಗೂಡು ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ಕೈಗೊಂಡ ಕ್ರಮಗಳ ಕುರಿತು ವಿವರಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಬೆಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ನಂಜನಗೂಡು ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ಕೈಗೊಂಡ ಕ್ರಮಗಳ ಕುರಿತು ವಿವರಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಲೆಟ್ಜ್‌ ಕಿಟ್‌ ಫೌಂಡೇಷನ್‌ ಸಲ್ಲಿಸಿರುವ ಪಿಐಎಲ್‌ ಸಿ.ಜೆ ಎ.ಎಸ್‌. ಓಕಾ ನೇತೃತ್ವದ ವಿಭಾಗೀಯ ಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತು. ಮೂಲ ಅರ್ಜಿಗೆ ಮೆಮೋ ಸಲ್ಲಿಸಿರುವ ವಕೀಲ ಜಿ.ಆರ್‌. ಮೋಹನ್‌, ಮೇ 18ರಂದು ವಿಜಯೇಂದ್ರ ಕುಟುಂಬ ಸಮೇತರಾಗಿ ನಂಜನಗೂಡು ನಂಜುಂಡೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪೂಜೆ ನಡೆಸಿದ ವಿಚಾರವನ್ನು ಗಮನಕ್ಕೆ ತಂದರು.

ಮೆಮೋ ಪರಿಶೀಲಿಸಿದ ನ್ಯಾಯಪೀಠ, ಒಬ್ಬ ವ್ಯಕ್ತಿಯ ಅನುಕೂಲಕ್ಕಾಗಿ ದೇವಾಲಯ ತೆರೆದು ಪೂಜೆ ನೆರವೇರಿಸಲಾಗಿದ್ದು, ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಲಾಗಿದೆ ಎಂಬ ಆರೋಪವಿದೆ. ಆದ್ದರಿಂದ ಈ ವಿಚಾರದಲ್ಲಿ ಕೈಗೊಂಡ ಕ್ರಮಗಳ ಕುರಿತು ಜೂ.3ರೊಳಗೆ ವರದಿ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿತು.

ಕೇವಲ ಅರ್ಚಕರು ಮಾತ್ರ ದೇವಾಲಕ್ಕೆ ತೆರಳಿ ಪೂಜೆ ಸಲ್ಲಿಸಲು ಅವಕಾಶವಿದೆ, ಹೀಗಿರುವಾಗ ವಿಜಯೇಂದ್ರ ದಂಪತಿ ಹೇಗೆ ದೇವಾಸ್ಥಾನದಲ್ಲಿ ಪೂಜೆ ಸಲ್ಲಿಸಿದರು ಎಂದು ವಕೀಲರು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?