ಮಡಿಕೇರಿ ಕೋವಿಡ್ ಆಸ್ಪತ್ರೆ 
ರಾಜ್ಯ

ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಮೊಬೈಲ್ ಕಳ್ಳತನ ಪ್ರಕರಣ: ಆರೋಪಿ ಬಂಧನ

ಮಡಿಕೇರಿ ಕೋವಿಡ್ ಆಸ್ಪತ್ರೆಯಿಂದ ಮೊಬೈಲ್ ಫೋನ್ ಕಳ್ಳತನ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.  ಕೆಡಿ ಸುಮಂತ್ (24) ಬಂಧಿತ ಆರೋಪಿಯಾಗಿದ್ದಾನೆ. 

ಮಡಿಕೇರಿ: ಮಡಿಕೇರಿ ಕೋವಿಡ್ ಆಸ್ಪತ್ರೆಯಿಂದ ಮೊಬೈಲ್ ಫೋನ್ ಕಳ್ಳತನ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.  ಕೆಡಿ ಸುಮಂತ್ (24) ಬಂಧಿತ ಆರೋಪಿಯಾಗಿದ್ದಾನೆ. 

ಕೋವಿಡ್-19 ಸೋಂಕಿನಿಂದ ಮೃತರಾದ ಉಷಾ ಕಿರಣ್ ಅವರ ಮೊಬೈಲ್ ಫೋನ್ ನ್ನು ಕೋವಿಡ್ ಆಸ್ಪತ್ರೆಯಿಂದ ನಮಗೆ ವಾಪಸ್ ನೀಡಿಲ್ಲ ಎಂದು ಅವರ ಕುಟುಂಬಸ್ಥರು ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 

ತನಿಖೆ ಆರಂಭಿಸಿದ ಪೊಲೀಸರು, ಆಸ್ಪತ್ರೆಗೆ ಪಾನೀಯಗಳನ್ನು ಸರಬರಾಜು ಮಾಡುತ್ತಿದ್ದ ಆರೋಪಿ ಸುಮಂತ್ ನನ್ನು ಬಂಧಿಸಿದ್ದಾರೆ. ಕಳ್ಳತನ ಪ್ರಕರಣದಲ್ಲಿ ಆರೋಪಿಯ ಇತಿಹಾಸವಿರುವುದನ್ನು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.

ಕೋವಿಡ್-19 ಸೋಂಕಿನಿಂದ ಮೃತಪಟ್ಟ ಉಷಾ ಕಿರಣ್, ಎಸ್ ಬಿ ಸೊಮಯ್ಯ ಮತ್ತು ಇನ್ನೊಬ್ಬರ ಮೊಬೈಲ್ ಫೋನ್ ನೊಂದಿಗೆ ವಿವಿಧ ಬ್ಯಾಂಕಿನ ಮೂರು ಟಿಎಎಂ ಕಾರ್ಡ್ ಗಳನ್ನು ಮರು ಪಡೆಯಲಾಗಿದೆ. ಎಸ್ ಪಿ ಕ್ಷಮಾ ಮಿಶ್ರಾ ಮಾರ್ಗದರ್ಶನದಲ್ಲಿ ಮಡಿಕೇರಿ ಇನ್ಸ್ ಪೆಕ್ಟರ್ ಅನೂಫ್ ಮಾದಪ್ಪ ನೇತೃತ್ವದಲ್ಲಿನ ತಂಡ ಈ ಪ್ರಕರಣದ ತನಿಖೆ ನಡೆಸುತ್ತಿತ್ತು. 

ಪ್ರಭಾ ಅವರ ಮೊಬೈಲ್ ಫೋನ್ ನ್ನು ಪೊಲೀಸರು ಇನ್ನೂ ಹುಡುಕುತ್ತಿದ್ದಾರೆ. ಅವರ 9 ವರ್ಷದ ಪುತ್ರಿ ಹೃಷಿಕಾ ಫೋನ್ ಗಾಗಿ ಮಾಡಿದ್ದ ಮನವಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್