ಸಂಗ್ರಹ ಚಿತ್ರ 
ರಾಜ್ಯ

ವಿಜಯನಗರ: ಮೃತ ಅಂಗನವಾಡಿ ಕಾರ್ಯಕರ್ತೆ ಪುತ್ರಿಗೆ 30 ಲಕ್ಷ ರೂ. ಪರಿಹಾರ ವಿತರಣೆ

ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಅಂಗನವಾಡಿ ಕಾರ್ಯಕರ್ತೆಯ ವಾರಸುದಾರರಿಗೆ 30 ಲಕ್ಷ ರೂ ಪರಿಹಾರ ಚೆಕ್ ಅನ್ನು ಬುಧವಾರ ವಿತರಿಸಲಾಯಿತು.

ವಿಜಯನಗರ: ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಅಂಗನವಾಡಿ ಕಾರ್ಯಕರ್ತೆಯ ವಾರಸುದಾರರಿಗೆ 30 ಲಕ್ಷ ರೂ ಪರಿಹಾರ ಚೆಕ್ ಅನ್ನು ಬುಧವಾರ ವಿತರಿಸಲಾಯಿತು.

ಹೊಸಪೇಟೆ ನಗರ ವ್ಯಾಪ್ತಿಯ 15ನೇ ವಾರ್ಡ-2ನೇ ಅಂಗನವಾಡಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಶಾರದಾ ಅವರು ಕೋವಿಡ್-19ರ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಕೋವಿಡ್ ನಿಂದ ಕಳೆದ ವರ್ಷ ಆ.19ರಂದು ಮರಣಹೊಂದಿದ್ದರು. ಹೀಗಾಗಿ ಅವರ ವಾರಸುದಾರರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 30ಲಕ್ಷ ರೂ.ಗಳ ಮರಣ ಪರಿಹಾರವನ್ನು ಬುಧವಾರ ವಿತರಿಸಲಾಯಿತು.

ಹುಡಾ ಅಧ್ಯಕ್ಷ ಅಶೋಕ್ ಜೀರೆ ಅವರು ಶಾರದಾ ಅವರ ಪುತ್ರಿ ಉಷಾ ಅವರಿಗೆ ಮರಣ ಪರಿಹಾರ ಮೊತ್ತವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಹೊಸಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧು ಎಲಿಗಾರ್, ಮುಖಂಡರಾದ ಧರ್ಮೇಂದ್ರ ಸಿಂಗ್, ಸಂದೀಪ್‍ಸಿಂಗ್ ಮತ್ತಿತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!