ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ನಗರದ ಬಡವರಿಗೆ ಶೀಘ್ರದಲ್ಲೇ ರೂ.5 ಲಕ್ಷಕ್ಕೆ ಸಿಗಲಿದೆ ಮನೆ!

ಶೀಘ್ರದಲ್ಲೇ ನಗರದಲ್ಲಿರುವ ಬಡವರು ಸಿಲಿಕಾನ್ ಸಿಟಿಯಲ್ಲಿ ರೂ.5 ಲಕ್ಷಕ್ಕೆ ಮನೆಗಳನ್ನು ಖರೀದಿ ಮಾಡುವ ಅವಕಾಶವನ್ನು ರಾಜ್ಯ ಸರ್ಕಾರ ನೀಡುತ್ತಿದೆ. 

ಬೆಂಗಳೂರು: ಶೀಘ್ರದಲ್ಲೇ ನಗರದಲ್ಲಿರುವ ಬಡವರು ಸಿಲಿಕಾನ್ ಸಿಟಿಯಲ್ಲಿ ರೂ.5 ಲಕ್ಷಕ್ಕೆ ಮನೆಗಳನ್ನು ಖರೀದಿ ಮಾಡುವ ಅವಕಾಶವನ್ನು ರಾಜ್ಯ ಸರ್ಕಾರ ನೀಡುತ್ತಿದೆ. 

ನಗರದಲ್ಲಿ ಬಡವರಿಗಾಗಿ ನಿರ್ಮಿಸುತ್ತಿರುವ 1 ಲಕ್ಷ ಬಹುಮಹಡಿ ವಸತಿ ಯೋಜನೆಯಡಿ ಈಗಾಗಲೇ ಪೂರ್ಣಗೊಂಡಿರುವ 6 ಸಾವಿರ ಮನೆಗಳನ್ನು ಅರ್ಹರಿಗೆ ಇದೇ ಆಗಸ್ಟ್‌ 15ರಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಸ್ತಾಂತರಿಸಲಿದ್ದಾರೆ’ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. 

ವಸತಿ ಯೋಜನೆಗೆ ಸಂಬಂಧಿಸಿದಂತೆ ರಾಜೀವ್‍ ಗಾಂಧಿ ವಸತಿ ನಿಗಮಕ್ಕೆ ಸರ್ಕಾರಿ ಜಮೀನು ಮಂಜೂರಾತಿ ಹಾಗೂ ಹಸ್ತಾಂತರ ಕುರಿತಂತೆ ಮಂಗಳವಾರ ನಡೆದ ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಗರ ಜಿಲ್ಲೆಯ ಎಲ್ಲ ಶಾಸಕರಿಗೂ ತಮ್ಮ ವ್ಯಾಪ್ತಿಯಲ್ಲಿ ಶೇ 50ರಷ್ಟು ಮನೆಗಳನ್ನು ಅರ್ಹ ಬಡವರಿಗೆ ವಿತರಿಸಲು ಅವಕಾಶ ಮಾಡಿಕೊಡಲಾಗುವುದು. ಎಲ್ಲಾ ಮನೆಗಳೂ 1 ಬಿಹೆಚ್'ಕೆ ಮಾದರಿಯಲ್ಲಿ ನಿರ್ಮಿಸಲಾಗುತ್ತಿದೆ. ಶೇ.10 ರಷ್ಟು ಮನೆಗಳನ್ನು ಮಾತ್ರ 2 ಬಿಹೆಚ್'ಕೆ ಮಾದರಿಯಲ್ಲಿ ನಿರ್ಮಿಸಲಾಗುತ್ತಿದ್ದು, 2 ಬಿಹೆಚ್'ಕೆ ಮನೆಗಳನ್ನು ಹರಾಜು ಹಾಕಲಾಗುತ್ತಿದೆ. 

1 ಬಿಹೆಚ್'ಕೆ ಮನೆಯ ವೆಚ್ಚ ರೂ.10.6 ಲಕ್ಷವಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಬ್ಸಿಡಿ ನೀಡುತ್ತಿರುವುದರಿಂದ ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ರೂ.7 ಲಕ್ಷ ನಿಗದಿಪಡಿಸಿದ್ದ ದರವನ್ನು ರೂ.5 ಲಕ್ಷಕ್ಕೆ ಇಳಿಕೆ ಮಾಡಲಾಗಿದೆ. ಎಸ್'ಸಿ/ಎಸ್'ಟಿ ವರ್ಗದವರಿಗೆ ರೂ.4.20 ಲಕ್ಷ ನಿಗದಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. 

‘ಯೋಜನೆಯ ಮೊದಲನೇ ಹಂತದಲ್ಲಿ 313 ಎಕರೆ ಸರ್ಕಾರಿ ಜಮೀನಿನಲ್ಲಿ 46,499 ಬಹುಮಹಡಿ ವಸತಿಗೃಹಗಳ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ. 45,148 ಮನೆಗಳ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ. 41,011 ಬಹುಮಹಡಿ ಮನೆಗಳ ನಿರ್ಮಾಣದ ಕಾಮಗಾರಿ ಆರಂಭಿಸಲಾಗಿದ್ದು, ಈ ಪೈಕಿ 848 ಮನೆಗಳ ಮೇಲ್ಛಾವಣಿ ಮತ್ತು 8,757 ಮನೆಗಳ ಪ್ಲಿಂತ್ ಪೂರ್ಣಗೊಂಡಿದೆ. 7,721 ಮನೆಗಳ ನಿರ್ಮಾಣ ತಳಪಾಯ ಹಂತದಲ್ಲಿದೆ. 9,943 ಮನೆಗಳ ತಳಪಾಯದ ಮಣ್ಣು ಅಗೆತದ ಹಂತದಲ್ಲಿದ್ದು, 13,742 ಮನೆಗಳ ಜಮೀನು ಸಮತಟ್ಟು ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

‘ಆನ್‍ಲೈನ್ ಮೂಲಕ ಈವರೆಗೆ 48,615 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಫಲಾನುಭವಿಗಳು ತಮ್ಮ ಇಚ್ಛೆಯಂತೆ ಫ್ಲ್ಯಾಟ್‍ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಯೋಜನೆಯ ಎರಡನೆಯ ಹಂತದಲ್ಲಿ 53,501 ಬಹುಮಹಡಿ ಮನೆಗಳನ್ನು ನಿರ್ಮಿಸಲಾಗುವುದು. ಈ ಪೈಕಿ 2,928 ಮನೆಗಳ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. 

ಕೊಳಚೆ ಅಭಿವೃದ್ಧಿ ಮಂಡಳಿ ಮೂಲಕ 1.80 ಲಕ್ಷ ಮನೆ ನಿರ್ಮಾಣ ಮಾಡುವ ಕೆಲಸ ಆರಂಭಗೊಂಡಿದೆ. ವಿವಿಧ ಹಂತದಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಒಂದು ವರ್ಷದ ಅವಧಿಯಲ್ಲಿ ಮನೆಗಳ ನಿರ್ಮಾಣ ಬಹುತೇಕ ಮುಗಿಯಲಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT