ರಾಜ್ಯ

'ಯಾಸ್' ಎಫೆಕ್ಟ್: ರಾಜ್ಯದಲ್ಲಿ ಇನ್ನು ಮೂರು ದಿನ ಮಳೆ ಸಾಧ್ಯತೆ

Manjula VN

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಪ್ರಬಲ 'ಯಾಸ್' ಚಂಡಮಾರುತ ಕಾಣಿಸಿಕೊಂಡಿದ್ದು, ರಾಜ್ಯದ ಹಲವೆಡೆ ಮಂಗಳವಾರ ಭಾರಿ ಮಳೆಯಾಗಿದ್ದು, ಇನ್ನು ಮೂರು ದಿನ ಮಳೆ ಮುಂದುವರೆಯಲಿದೆ.

29ರ ವರೆಗೆ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಚಂಡಮಾರುತದ ಪ್ರಭಾವದಿಂದಾಗಿ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನವೂ ಉತ್ತಮ ಮಳೆಯಾಗಲಿದೆ. ಮೇ 26ಕ್ಕೆ ಕರಾವಳಿ ಸೇರಿ ಒಟ್ಟು 7 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.

ಮೇ 26ರಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರಿ ಮಳೆ ನಿರೀಕ್ಷೆ ಇರುವುದರಿಂದ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ.

SCROLL FOR NEXT