ಸಚಿವ ಜಗದೀಶ್ ಶೆಟ್ಟರ್ 
ರಾಜ್ಯ

ಆಕ್ಸಿಜನ್ ಘಟಕ ಸ್ಥಾಪಿಸುವ ಕೈಗಾರಿಕೋದ್ಯಮಿಗಳ ಪ್ರೋತ್ಸಾಹಿಸಲು ಉತ್ತೇಜಕ ಯೋಜನೆ: ಸಚಿವ ಜಗದೀಶ್ ಶೆಟ್ಟರ್

ನೂತನ ಆಮ್ಲಜನಕ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲು ಕೈಗಾರಿಕಾ ಇಲಾಖೆಯಿಂದ ಉತ್ತೇಜಕ ಯೋಜನೆ ಜಾರಿಗೆ ತರಲು ಚಿಂತನೆ ನಡೆದಿದೆ ಎಂದು ರಾಜ್ಯದ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಉಸ್ತುವಾರಿ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅವರು ಹೇಳಿದ್ದಾರೆ.

ಬೆಂಗಳೂರು: ರಾಜ್ಯವನ್ನು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬಿಗೊಳಿಸುವ ಉದ್ದೇಶದಿಂದ ನೂತನ ಆಮ್ಲಜನಕ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲು ಕೈಗಾರಿಕಾ ಇಲಾಖೆಯಿಂದ ಉತ್ತೇಜಕ ಯೋಜನೆ ಜಾರಿಗೆ ತರಲು ಚಿಂತನೆ ನಡೆದಿದೆ ಎಂದು ರಾಜ್ಯದ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಉಸ್ತುವಾರಿ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅವರು ಹೇಳಿದ್ದಾರೆ.

ರಾಜ್ಯದಲ್ಲಿನ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯಕ್ಕೆ 1200 ಮೆಟ್ರಿಕ್ ಟನ್ ದ್ರವೀಕೃತ ಆಮ್ಲಜನಕವನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ಹೆಚ್ಚಿನ ಪ್ರಮಾಣದಲ್ಲಿ ರಾಜ್ಯದಲ್ಲಿಯೇ ಬಳಸಿಕೊಳ್ಳಲು ಅನುಮತಿ ನೀಡಿರುವುದರಿಂದ ಸಾಗಣೆ ಸಮಯ ಉಳಿಯಲಿದೆ ಎಂದು ಹೇಳಿದ್ದಾರೆ. 

ಕೇಂದ್ರ ಸರ್ಕಾರದೊಂದಿಗೆ ನಿರಂತರ ಮಾತುಕತೆ ಸಫಲವಾಗಿದ್ದು, ರಾಜ್ಯದಲ್ಲಿ ಆಮ್ಲಜನಕದ ಉತ್ಪಾದನೆಯನ್ನು ಹೆಚ್ಚಿಸುವ ಉದ್ದೇಶದಿಂದ ನೂತನ ಉತ್ಪಾದನಾ ಘಟಕಗಳನ್ನು ಪ್ರಾರಂಭಿಸಲು ಮುಂದಾಗುವ ಕೈಗಾರಿಕೋದ್ಯಮಿಗಳಿಗೆ ಆಕರ್ಷಕ ಉತ್ತೇಜನ ನೀಡಲು ಯೋಜನೆ ರೂಪಿಸುವಂತೆ ಕೈಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಬಗ್ಗೆ ವಿಸ್ತೃತ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. 

ಜಿಲ್ಲೆಯಲ್ಲಿ ಆಮ್ಲಜನಕ ಬಫರ್ ಸ್ಟಾಕ್ ಸ್ಟೊರೇಜ್ ಸಾಮರ್ಥ್ಯವನ್ನು ಹೆಚ್ಚಿಸಲು ಯೋಜನೆ ರೂಪಿಸವಂತೆ ಸೂಚಿಸಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ 20 ಮೆಟ್ರಿಕ್ ಟನ್ ನಷ್ಟು ಸ್ಟೋರೇಜ್ ಸಾಮರ್ಥ್ಯ ಹೆಚ್ಚಿಸಿದರೆ ತುರ್ತು ಸಂದರ್ಭದಲ್ಲಿ ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದರು. 

ಆಯಾ ಜಿಲ್ಲೆಗಳಲ್ಲಿ ಇರುವ ಸಕ್ರಿಯಯ ಪ್ರಕರಣಗಳ ಆಧಾರದ ಮೇಲೆ ಆಮ್ಲಜನಕವನ್ನು ಹಂಚಿಕೆ ಮಾಡಲಾಗುತ್ತಿದೆ. ಪ್ರತಿ ದಿನ ಆಯಾ ಆಸ್ಪತ್ರೆಗಳಿಗೆ ನಿಗದಿಪಡಿಸಲಾಗಿರುವ ಪ್ರಮಾಣದಲ್ಲಿ ಆಮ್ಲಜನಕ ರವಾನೆ ಆಗುತ್ತಿರುವ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಕಳೆದ 5 ದಿನಗಳಲ್ಲಿ ಕ್ರಮವಾಗಿ 889.93, 855.21, 1062.71, 899.22 ಮತ್ತು 728.36 ಟನ್‌ ಆಮ್ಲಜನಕ ರಾಜ್ಯಕ್ಕೆ ದೊರಕಿದೆ. ಒಟ್ಟಾರೆಯಾಗಿ ಸರಾಸರಿಯಾಗಿ 887.08 ಟನ್‌ ಆಮ್ಲಜನಕ ದೊರೆತಿದೆ. ಕೇಂದ್ರ ಸಹಕಾರದಿಂದ 150 ಟನ್‌ ದ್ರವೀಕೃತ ಆಮ್ಲಜನಕ ಮಂಗಳೂರು ಬಂದರಿಗೆ ಬಂದು ತಲುಪಿದೆ. ಕೇಂದ್ರದ ಸಹಕಾರದಿಂದ ರೈಲುಗಳಲ್ಲಿ ರವಾನೆಯಾಗುತ್ತಿರುವ ಆಮ್ಲಜನಕದಿಂದ ರಾಜ್ಯದಲ್ಲಿ ಆಮ್ಲಜನಕ ಪರಿಸ್ಥಿತಿ ದಿನೇ ದಿನೇ ಸುಧಾರಿಸುತ್ತಿದೆ’ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Vice President Election 2025: ಮತದಾನ ಪ್ರಕ್ರಿಯೆ ಆರಂಭ, ಪ್ರಧಾನಿ ಮೋದಿ-ದೇವೇಗೌಡ ಸೇರಿ ಹಲವು ಗಣ್ಯರಿಂದ ಮತದಾನ

ಇಂದು ಉಪರಾಷ್ಟ್ರಪತಿ ಚುನಾವಣೆ: ಮತದಾನದಿಂದ 12 ಸಂಸದರು ದೂರ; NDA ಅಭ್ಯರ್ಥಿ C.P ರಾಧಾಕೃಷ್ಣನ್‌ ಗೆಲುವು ಬಹತೇಕ ಖಚಿತ!

'ಇದ್ರೆ ನೆಮ್ದಿಯಾಗಿರ್ಬೇಕು': 'ನಂಗೆ ಒಂಚೂರು ವಿಷ ಬೇಕು'... ನಟ Darshan ಬೇಡಿಕೆಗೆ ಕೋರ್ಟ್ ಶಾಕ್! ಅಗಿದ್ದೇನು?

'ಹಿಂದೂ ವಿರೋಧಿ' ನಡೆ: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಕಮಲ ಪಾಳಯ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆ

ತೇಜಸ್ವಿ ಯಾದವ್ ಪತ್ನಿ 'ಜೆರ್ಸಿ ಹಸು': ಬಿಹಾರ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ RJD ಮಾಜಿ ಶಾಸಕನ ಹೇಳಿಕೆ

SCROLL FOR NEXT