ಆರೋಪಿಗಳು 
ರಾಜ್ಯ

ಬೆಂಗಳೂರು ಗ್ಯಾಂಗ್ ರೇಪ್: ಮೂವರು ಆರೋಪಿಗಳು 14 ದಿನ ಪೊಲೀಸ್ ಕಸ್ಟಡಿಗೆ

ಬಾಂಗ್ಲಾ ಮೂಲದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ನ್ಯಾಯಾಲಯ ಹದಿನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. 

ಬೆಂಗಳೂರು: ಬಾಂಗ್ಲಾ ಮೂಲದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ನ್ಯಾಯಾಲಯ ಹದಿನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. 

ಇಂದು ಪೊಲೀಸರು ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆರೋಪಿಗಳನ್ನು 10ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ಗಂಭೀರತೆ, ಆರೋಪಿಗಳಿಂದ ಇನ್ನೂ ಸಾಕಷ್ಟು ಮಾಹಿತಿ ಕಲೆಹಾಕುವ ದೃಷ್ಟಿಯಿಂದ ಮೂವರನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. 

ಯುವತಿ ಮೇಲಿನ ಗ್ಯಾಂಗ್ ರೇಪ್ ಸಂಬಂಧ ರಾಮಮೂರ್ತಿನಗರ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ. ಇನ್ನು ಸ್ಥಳ ಮಹಜರು ಮಾಡುವ ವೇಳೆ ಪ್ರಮುಖ ಇಬ್ಬರು ಆರೋಪಿಗಳ ತಪ್ಪಿಸಿಕೊಳ್ಳಲು ಯತ್ನಿಸಿದ್ದರಿಂದ ಪೊಲೀಸರು ಅವರ ಕಾಲಿಗೆ ಗುಂಡು ಹಾರಿಸಿದ್ದರು. 

ಬಂಧಿತರನ್ನು ಸಾಗರ್, ಮೊಹಮ್ಮದ್ ಬಾಬ್ ಶೇಕ್, ರಿದಾಯ್ ಬಾಬು ಹಾಗೂ ಹಕೀಲ್ ಬಂಧಿತ ಆರೋಪಿಗಳು. ಇವರೆಲ್ಲಾ ಬಾಂಗ್ಲಾ ಮೂಲದವರಾಗಿದ್ದು ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದರು. 

ಯುವತಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಮದ್ಯದ ಬಾಟಲಿ ಇರಿಸಿ ಕಾಮುಕರು ವಿಕೃತಿ ಮೆರೆದಿದ್ದರು. ಅಲ್ಲದೆ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು ವಿಡಿಯೋ ವೈರಲ್ ಆದ ನಂತರ ಪ್ರಕರಣ ಬೆಳಕಿಗೆ ಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT