ಅಶ್ವತ್ಥ್ ನಾರಾಯಣ್ 
ರಾಜ್ಯ

ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯದ ಕೋವಿಡ್ ಪರಿಸ್ಥಿತಿ ವಿವರಿಸಿದ ಡಿಸಿಎಂ ಅಶ್ವತ್ಥ್ ನಾರಾಯಣ್, ಕಾರಜೋಳ

ರಾಜ್ಯದ ಕೋವಿಡ್‌ ಪರಿಸ್ಥಿತಿ ಹಾಗೂ ನಿರ್ವಹಣೆ ಬಗ್ಗೆ ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡಿದರು.

ಬೆಂಗಳೂರು: ರಾಜ್ಯದ ಕೋವಿಡ್‌ ಪರಿಸ್ಥಿತಿ ಹಾಗೂ ನಿರ್ವಹಣೆ ಬಗ್ಗೆ ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡಿದರು.

ಡಿಸಿಎಂ  ಗೋವಿಂದ ಕಾರಜೋಳ ಅವರೊಂದಿಗೆ ರಾಜಭವನಕ್ಕೆ ತೆರಳಿದ  ಡಾ.ಅಶ್ವತ್ಥನಾರಾಯಣ, ಈವರೆಗೂ ಸೋಂಕು ತಡೆಗಟ್ಟಲು ಲಾಕ್‌ಡೌನ್‌, ಲಸಿಕೆ ಅಭಿಯಾನ, ವೈದ್ಯಕೀಯ ಮೂಲಸೌಕರ್ಯ ಅಭಿವೃದ್ಧಿ, ಸಿಬ್ಬಂದಿ ನೇಮಕ ಸೇರಿದಂತೆ ಸರಕಾರ ಕೈಗೊಂಡಿರುವ ಎಲ್ಲ ಕ್ರಮಗಳ ಬಗ್ಗೆ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ಸಮಗ್ರ  ಮಾಹಿತಿ ನೀಡಿದರು.

ಲಾಕ್ಡೌನ್‌ ನಂತರ ರಾಜ್ಯದಲ್ಲಿ ಸೋಂಕಿನ ಪಾಸಿಟಿವಿಟಿ ದರವೂ ಕಡಿಮೆಯಾಗಿ ಸಾವಿನ ಪ್ರಮಾಣವೂ ಕಡಿಮೆಯಾಗಿದೆ. ಇದರ ಜತೆಯಲ್ಲೇ 45 ವರ್ಷ ಮೀರಿದ ಮುಂಚೂಣಿ ಕಾರ್ಯಕರ್ತರು ಹಾಗೂ ಆದ್ಯತಾ ಗುಂಪಿಗೆ ಲಸಿಕೆ ನೀಡವ ಕೆಲಸ ನಡೆಯುತ್ತಿದೆ. ಇಡೀ ರಾಜ್ಯಾದ್ಯಂತ ಆಮ್ಲಜನಕ, ಔಷಧಿ, ರೆಮಿಡಿಸಿವಿರ್‌ ಕೊರತೆಯನ್ನು ನೀಗಿಸಲಾಗಿದೆ ಎಂದು ಅಂಕಿ- ಅಂಶಗಳ ಸಹಿತ ರಾಜ್ಯಪಾಲರಿಗೆ ವಿವರಣೆ ಸಲ್ಲಿಸಿದರು.

ಬ್ಲ್ಯಾಕ್‌ ಫಂಗಸ್‌ ಬಗ್ಗೆಯೂ ರಾಜ್ಯಪಾಲರಿಗೆ ಮಾಹಿತಿ ನೀಡಿದ ಡಿಸಿಎಂ ಅವರು, ಈ ಕಾಯಿಲೆಗೆ ಸಂಬಂಧಿಸಿದ ಔಷಧಿಗಳ ಕೊರತೆ ನಿವಾರಣೆಗೆ ಎಲ್ಲ ಪ್ರಯತ್ನ ನಡೆದಿದೆ. ನಿರಂತರವಾಗಿ ಕೇಂದ್ರ ಸರಕಾರದ ಜತೆ ಸಂಪರ್ಕದಲ್ಲಿದ್ದು, ಇಡೀ ಸರಕಾರ ಒಂದು ತಂಡದ ರೂಪದಲ್ಲಿ ಕೆಲಸ ಮಾಡುತ್ತಿದೆ ಎಂದು ರಾಜ್ಯಪಾಲರಿಗೆ ತಿಳಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT