ಸಂಗ್ರಹ ಚಿತ್ರ 
ರಾಜ್ಯ

ರೆಮ್ಡೆಸಿವಿರ್ ಅಕ್ರಮ ಮಾರಾಟಕ್ಕೆ ಆಸ್ಪತ್ರೆ ಸಿಬ್ಬಂದಿ-ವಿತರಕರ ನಡುವಿನ 'ಅಕ್ರಮ ಸಂಪರ್ಕ'ಗಳೇ ಕಾರಣ!

ಕೊರೋನಾ ಸೋಂಕಿತರ ಚಿಕಿತ್ಸೆಗೆ ಪರಿಣಾಮಕಾರಿಯಾಗಿರುವ ರೆಮ್ಡೆಸಿವಿರ್ ಔಷಧದ ಅಕ್ರಮ ಮಾರಾಟ ನಿಯಂತ್ರಿಸಲು ಸರ್ಕಾರ ಸಾಕಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಂಡಿರುವ ಹೊರತಾಗಿಯೂ ರಾಜ್ಯದಲ್ಲಿ ರೆಮ್ಡೆಸಿವಿರ್ ಅಕ್ರಮ ಮಾರಾಟ ಇನ್ನೂ ನಿಂತಿಲ್ಲ.

ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಪರಿಣಾಮಕಾರಿಯಾಗಿರುವ ರೆಮ್ಡೆಸಿವಿರ್ ಔಷಧದ ಅಕ್ರಮ ಮಾರಾಟ ನಿಯಂತ್ರಿಸಲು ಸರ್ಕಾರ ಸಾಕಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಂಡಿರುವ ಹೊರತಾಗಿಯೂ ರಾಜ್ಯದಲ್ಲಿ ರೆಮ್ಡೆಸಿವಿರ್ ಅಕ್ರಮ ಮಾರಾಟ ಇನ್ನೂ ನಿಂತಿಲ್ಲ. ಇದಕ್ಕೆ ಪ್ರಮುಖ ಕಾರಣ ಆಸ್ಪತ್ರೆ ಸಿಬ್ಬಂದಿ-ವಿತರಕರ ನಡುವಿನ 'ಅಕ್ರಮ ಸಂಪರ್ಕ'ಗಳೇ ಕಾರಣ ಎಂದು ಹೇಳಲಾಗುತ್ತಿದೆ. 

ನಗರವೊಂದರಲ್ಲಿ ಪೊಲೀಸರು 20ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, 50 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರಲ್ಲಿ ವೈದ್ಯರು, ಆಸ್ಪತ್ರೆಯ ಇತರೆ ಸಿಬ್ಬಂದಿಗಳೂ ಸೇರಿದ್ದಾರೆ. 

ಸರ್ಕಾರವು ಔಷಧ ನಿಯಂತ್ರಕ ಕಚೇರಿಯಿಂದ ವಿತರಣೆಯನ್ನು ಸುವ್ಯವಸ್ಥಿತಗೊಳಿಸಿದ್ದರಿಂದ ರೆಮ್ಡೆಸಿವಿರ್ ಕಾಳಸಂತೆ ಮಾರಾಟ ಪ್ರಕರಣಗಳು ಕಡಿಮೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಅಕ್ರಮ ದಂಧೆಯ ಹಿಂದೆ ಆಸ್ಪತ್ರೆ ಅಥವಾ ಫಾರ್ಮಸಿ ಸಿಬ್ಬಂದಿಗಳು ಇರುವ ಶಂಕೆಗಳು ವ್ಯಕ್ತವಾಗುತ್ತಿವೆ. 

ರೆಮ್ಡೆಸಿವಿರ್ ಔಷಧಕ್ಕಾಗೀ ಹಾಹಾಕಾರ ಶುರುವಾದ ಕೂಡಲೇ ಕೆಲವರು ಔಷಧಿಗಳನ್ನು ತಮ್ಮ ಬಳಿಯೇ ಇಟ್ಟುಕೊಳ್ಳಲು ಆರಂಭಿಸಿದ್ದರು. ಮಾರುಕಟ್ಟೆಯ ಬೇಡಿಕೆಯನ್ನು ದುರ್ಬಳಕೆ ಮಾಡಿಕೊಳ್ಳಲು ಆರಂಭಿಸಿದ್ದರು. ಕೆಲವು ಪ್ರಕರಣಗಳಲ್ಲಿ ಔಷಧಿ ಮಾರಾಟ ಮಳಿಗೆಗಳ ಮಾಲೀಕರು ಹಾಗೂ ಔಷಧಿ ವಿತರಕರೇ ಅಕ್ರಮವಾಗಿ ಮಾರಾಟ ಮಾಡಿದ್ದರು. ಕೆಲ ಪ್ರಕರಣಗಳಲ್ಲಿ ಆಸ್ಪತ್ರೆಯ ಸಿಬ್ಬಂದಿಗಳೇ ಭಾಗಿಯಾಗಿರುವುದು ಕಂಡು ಬಂದಿತ್ತು ಎಂದು ಅಪರಾಧ ವಿಭಾಗ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಹೇಳಿದ್ದಾರೆ. 

ರೋಗಿಗೆ 2-3 ರೆಮ್ಡೆಸಿವಿರ್ ಔಷಧಿ ನೀಡಬೇಕೆಂದಿದ್ದರೆ, ಆಸ್ಪತ್ರೆಯ ಸಿಬ್ಬಂದಿಗಳು ಒಂದು ಬಾಟಲಿ ಔಷಧಿ ಮಾತ್ರ ನೀಡಿ, ಉಳಿದ ಔಷಧಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ. 

ಇನ್ಶುರೆನ್ಸ್ ಇದ್ದ ರೋಗಿಗಳಿಗೆ ಸೂಕ್ತ ರೀತಿಯ ಚಿಕಿತ್ಸೆ ನೀಡುವ ಆಸ್ಪತ್ರೆಯ ಸಿಬ್ಬಂದಿಗಳು, ಹಣ ನೀಡುವ ರೋಗಿಗಳಿಗೆ ಮಾತ್ರ ಔಷಧಿ ಇಲ್ಲ ಎಂದು ಹೇಳುತ್ತಾರೆ. ನಂತರ ಹಣ ನೀಡಿದ ಬಳಿಕ ಔಷಧಿ ಕೊಡುವ ಭರವಸೆ ನೀಡುತ್ತಾರೆ. ರೋಗಿಯ ಸಂಬಂಧಿಕರ ಆರ್ಥಿಕ ಸಾಮರ್ಥ್ಯವನ್ನು ಗಮನಿಸಿ ಔಷಧಿಯ ಬೆಲೆಯನ್ನು ನಿಗದಿ ಮಾಡುತ್ತಿದ್ದಾರೆಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT