ಸಿಎಂ ಯಡಿಯೂರಪ್ಪ 
ರಾಜ್ಯ

ಕೊರೋನಾ ಸೋಂಕು ಹೆಚ್ಚು ಇರುವ ಜಿಲ್ಲೆಗಳಿಗೆ ಸಿಎಂ ಯಡಿಯೂರಪ್ಪ ಖುದ್ದು ಭೇಟಿ, ಪ್ರಗತಿ ಪರಿಶೀಲನೆ

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇನ್ನು ಮುಂದೆ ಪ್ರತಿ ಒಂದು ಅಥವಾ ಎರಡು ವಾರಗಳಿಗೊಮ್ಮೆ ಒಂದೊಂದು ಜಿಲ್ಲೆಗೆ ತೆರಳಿ ಅಲ್ಲಿನ ಕೋವಿಡ್ ನಿರ್ವಹಣೆ ಸೇರಿದಂತೆ ಪ್ರಗತಿ ಪರಿಶೀಲನೆ ನಡೆಸಲು ನಿರ್ಧರಿಸಿದ್ದಾರೆ.

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿ ಕೆಲವರಿಂದ ಪ್ರಯತ್ನ ಆರಂಭವಾದ ಬೆನ್ನಲ್ಲೇ ಮತ್ತಷ್ಟು ಕ್ರಿಯಾಶೀಲರಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇನ್ನು ಮುಂದೆ ಪ್ರತಿ ಒಂದು ಅಥವಾ ಎರಡು ವಾರಗಳಿಗೊಮ್ಮೆ ಒಂದೊಂದು ಜಿಲ್ಲೆಗೆ ತೆರಳಿ ಅಲ್ಲಿನ ಕೋವಿಡ್ ನಿರ್ವಹಣೆ ಸೇರಿದಂತೆ ಪ್ರಗತಿ ಪರಿಶೀಲನೆ ನಡೆಸಲು ನಿರ್ಧರಿಸಿದ್ದಾರೆ.

ಈ ಜಿಲ್ಲಾ ಪ್ರಗತಿ ಪರಿಶೀಲನೆ ಶುಕ್ರವಾರದಿಂದಲೇ ಆರಂಭಗೊಂಡಿದ್ದು, ಮೊದಲ ಜಿಲ್ಲೆಯಾಗಿ ತುಮಕೂರಿಗೆ ಭೇಟಿ ನೀಡಿದ ಯಡಿಯೂರಪ್ಪ ಅವರು ಕೋವಿಲ್ ಪರಿಶೀಲನಾ ಸಭೆ ನಡೆಸುವ ಮೂಲಕ ಕೋವಿಡ್ ನಿರ್ವಹಣೆಗೆ ಪ್ರಾಶಸ್ತ್ಯ ನೀಡಿದರು. 

ಮೂರು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳು ರಾಜ್ಯದ ವಿವಿಧ ಜಿಲ್ಲೆಗಳ ಆಯ್ದ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿ ಗ್ರಾಮೀಣ ಭಾಗದಲ್ಲಿನ ಕೋವಿಡ್ ಹೆಚ್ಚಳವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಲವಾರು ಸಲಹೆ ಹಾಗೂ ಸೂಚನೆಗಳನ್ನು ನೀಡಿದ್ದರು. 

ತುಮಕೂರಿಗೆ ತೆರಳುವ ಮೊದಲು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಇನ್ನು ಮುಂದೆ ಪ್ರತಿ ಒಂದು ಅಥವಾ ಎರಡು ವಾರಕ್ಕೊಮ್ಮೆ ಎಂಬಂತೆ ಒಂದೊಂದು ಜಿಲ್ಲೆಗೆ ಭೇಟಿ ನೀಡುತ್ತೇನೆ. ಅಲ್ಲಿನ ಕೋವಿಡ್ ಪರಿಸ್ಥಿತಿಯ ನಿರ್ವಹಣೆಯೂ ಸೇರಿದಂತೆ ಇನ್ನಿತರೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲು ಉದ್ದೇಶಿಸಿದ್ದೇನೆ. ಆ ಭಾಗವಾಗಿ ಮೊದಲಿಗೆ ತುಮಕೂರು ಜಿಲ್ಲೆಗೆ ಭೇಟಿ ನೀಡುತ್ತಿದ್ದೇನೆಂದು ತಿಳಿಸಿದರು. 

ಇದಕ್ಕೂ ಮುನ್ನ ಬೆಂಗಳೂರಿನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿಯೂ ಕೊರೋನಾ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಯಡಿಯೂರಪ್ಪ ಅವರು, ಲಾಕ್ಡೌನ್ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿರುವ ಜನರು ಪ್ರಮುಖವಾಗಿ ಕುಗ್ರಾಮಗಳಲ್ಲಿರುವ ಜನರು ವೈದ್ಯಕೀಯ ಸೇವೆ ಪಡೆಯಲು ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ವೈದ್ಯರು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಬೇಕು, 

ಸದ್ಯ ಜಾರಿಯಲ್ಲಿರುವ ಕಠಿಣ ನಿಯಮಗಳಿಂದ ನಗರಗಳಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆಯಲ್ಲಿ‌ ಇಳಿಕೆಯಾಗಿದೆ. ನಗರಗಳ ಜತೆಗೆ ಹಳ್ಳಿಗಳಲ್ಲಿ ಕೊವಿಡ್ ಸೋಂಕಿನ ಪ್ರಮಾಣ ಕಡಿಮೆ‌ ಮಾಡುವ ನಿಟ್ಟಿನಲ್ಲಿ ಒತ್ತು ನೀಡಬೇಕು. ವೈದ್ಯರ ನಡೆ ಹಳ್ಳಿಕಡೆ ಕಾರ್ಯಕ್ರಮವನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT