ರಾಜ್ಯ

ಸಂಪೂರ್ಣ ಆಸ್ತಿ ತೆರಿಗೆ ಪಾವತಿಸುವವರಿಗೆ ರಿಯಾಯ್ತಿ ಯೋಜನೆ ಜೂನ್ 30ರ ವರೆಗೆ ವಿಸ್ತರಣೆ: ಬಿಬಿಎಂಪಿ

Vishwanath S

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ 2021-22ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆಯನ್ನು ಒಂದೇ ಕಂತಿನಲ್ಲಿ ಪಾವತಿಸುವವರಿಗೆ ಶೇ.5ರಷ್ಟು ರಿಯಾಯಿತಿ ನೀಡುವ ಕೊಡುಗೆಯನ್ನು ಜೂನ್ 30ರವರೆಗೆ ವಿಸ್ತರಿಸಿ ನಗರಾಭಿವೃದ್ಧಿ ಇಲಾಖೆ ಸೋಮವಾರ ಅಧಿಸೂಚನೆ ಹೊರಡಿಸಿದೆ.

ಸಾಮಾನ್ಯವಾಗಿ ಆರ್ಥಿಕ ವರ್ಷದಲ್ಲಿ ಏಪ್ರಿಲ್ ತಿಂಗಳ ಕೊನೆಯ ದಿನದೊಳಗೆ ಆಸ್ತಿ ತೆರಿಗೆ ಪಾವತಿಸಿದವರಿಗೆ ಮಾತ್ರ ಶೇ.5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಆದರೆ, ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ  ಬಿಬಿಎಂಪಿಯು ಆಸ್ತಿ ತೆರಿಗೆಯಲ್ಲಿ ರಿಯಾಯಿತಿ ಪಡೆಯುವ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಿತ್ತು.

ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಬ್ಯಾಂಕ್ ಗಳಿಗೆ ತೆರಳಿ ಚಲನ್ ಪಡೆದು ತೆರಿಗೆ ಪಾವತಿ ಮಾಡುವವರು ಸಮಸ್ಯೆ ಎದುರಿಸಿದ್ದರು. ಹಾಗಾಗಿ ರಿಯಾಯಿತಿಯ ಅವಧಿಯನ್ನು ಮತ್ತೆ ವಿಸ್ತರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಹೊಸ ಆದೇಶ ಹೊರಡಿಸಿದೆ.

SCROLL FOR NEXT