ಸಂಗ್ರಹ ಚಿತ್ರ 
ರಾಜ್ಯ

ಬೀಗ ಹಾಕಿದ ಮನೆಗಳ ಕಿಟಕಿ, ಹೂವಿನ ಕುಂಡದಲ್ಲಿಟ್ಟ ಕೀ ಎಗರಿಸಿ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಬೀಗ ಹಾಕಿದ ಮನೆಗಳ ಕಿಟಕಿ, ಹೂವಿನ ಕುಂಡದಲ್ಲಿಟ್ಟ ಕೀ ಎಗರಿಸಿ ಕಳ್ಳತನ ಮಾಡುತ್ತಿದ್ದ ಐನಾತಿ ಜೋಡಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಬೆಂಗಳೂರು: ಬೀಗ ಹಾಕಿದ ಮನೆಗಳ ಕಿಟಕಿ, ಹೂವಿನ ಕುಂಡದಲ್ಲಿಟ್ಟ ಕೀ ಎಗರಿಸಿ ಕಳ್ಳತನ ಮಾಡುತ್ತಿದ್ದ ಐನಾತಿ ಜೋಡಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಪ್ರವೀಣ್ ಆರ್ (23), ಸೂರ್ಯ ಎಂ (19) ಎಂದು ಗುರ್ತಿಸಲಾಗಿದೆ. ಬಂಧಿತರಿಬ್ಬರೂ ಮಾಗಡಿ ರಸ್ತೆಯ ನಿವಾಸಿಗಳಾಗಿದ್ದು, ಕಾರ್ಮಿಕರಾಗಿ ಕೆಲಸ ಮಾಡಿಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳಿಂದ ರೂ.6.5 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.

ಈ ತಿಂಗಳು ಅಕ್ಟೋಬರ್ 6 ರಂದು ಇಬ್ಬರು ಆರೋಪಿಗಳು ಮನೆಗಳ್ಳತನ ಮಾಡಿದ್ದರು. ಮನೆ ಕಿಟಕಿಯಲ್ಲಿಟ್ಟಿದ್ದ ಕೀ ಬಳಸಿ ಈ ಕೃತ್ಯ ಎಸಗುತ್ತಿದ್ದರು. ಈ ಕೆಲಸಕ್ಕೆ ಇಳಿಯುವ ಮುನ್ನ ಕಿಲಾಡಿ ಜೋಡಿ ಪೂರ್ತಿ ಏರಿಯಾ ವಾಚ್ ಮಾಡಿದ್ದರು. ಬಳಿಕ ಬೀಗ ಹಾಕಿದ ಮನೆಗಳ ಸುತ್ತ ಹುಡುಕಾಟ ನಡೆಸಿದ್ದರು. ಕಿಟಕಿ, ಹೂಕುಂಡದಲ್ಲಿ ಇಟ್ಟ ಕೀ ಸಿಕ್ಕರೆ ಕಳ್ಳತನಕ್ಕೆ ಇಳಿಯುತ್ತಿದ್ದರು.

ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ಆರೋಪಿಗಳ ಬೆನ್ನಟ್ಟಿದ್ದ ಪೊಲೀಸರು ಇಬ್ಬರನ್ನೂ ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video