ರಾಜ್ಯ

ಕಂಠೀರವ ಕ್ರೀಡಾಂಗಣದಲ್ಲಿ 66ನೇ ಕನ್ನಡ ರಾಜ್ಯೋತ್ಸವ: ಸಿಎಂ ಬೊಮ್ಮಾಯಿ ಧ್ವಜಾರೋಹಣ, ನಟ ಪುನೀತ್ ರಾಜ್ ಕುಮಾರ್'ಗೆ ಗೌರವ ನಮನ

Manjula VN

ಬೆಂಗಳೂರು: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಧ್ವಜಾರೋಹಣ ನೆರವೇರಿಸಿದ್ಜು. ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಸಾರ್ವಜನಿಕ ಇಲಾಖೆಯು ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿಯವರು, ಮೊದಲಿಗೆ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ತದನಂತರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕನ್ನಡ ಧ್ವಜಾರೋಹಣ ಮಾಡಿದರು.

ಧ್ವಜಾರೋಹಣ ನೆರವೇರಿಸಿದ ಬಳಿಕ ಹೃದಯಾಘಾತದಿಂದ ನಿಧನ ಹೊಂದಿನ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡಿ ಗೌರವ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ಸಾರ್ವಜನಿಕ ಶಿಕ್ಷಣ ಇಲಾಖೆ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಆಯುಕ್ತ ಡಾ.ಆರ್. ವಿಶಾಲ್ ಉಪಸ್ಥಿತರಿದ್ದರು.

SCROLL FOR NEXT