ರೋಹಿಂಗ್ಯಾಗಳು 
ರಾಜ್ಯ

ಕರ್ನಾಟಕದಿಂದ ರೋಹಿಂಗ್ಯಾಗಳನ್ನು ಗಡಿಪಾರು ಮಾಡಲ್ಲ ಎಂದಿದ್ದ ಸರ್ಕಾರ, ಈಗ 'ಸುಪ್ರೀಂ' ಆದೇಶಕ್ಕೆ ಬದ್ಧ ಎಂದಿದೆ!

ಕರ್ನಾಟಕದಲ್ಲಿ 126 ರೋಹಿಂಗ್ಯಾ ವಲಸಿಗರನ್ನು ಪತ್ತೆ ಹಚ್ಚಲಾಗಿದೆ. ಅವರನ್ನು ಯಾವುದೇ ಶಿಬಿರ ಅಥವಾ ಬಂಧನ ಕೇಂದ್ರದಲ್ಲಿ ರಾಜ್ಯ ಪೊಲೀಸರು ಇಟ್ಟಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ತಿಳಿಸಿದೆ.

ಬೆಂಗಳೂರು: ಕರ್ನಾಟಕದಲ್ಲಿ 126 ರೋಹಿಂಗ್ಯಾ ವಲಸಿಗರನ್ನು ಪತ್ತೆ ಹಚ್ಚಲಾಗಿದೆ. ಅವರನ್ನು ಯಾವುದೇ ಶಿಬಿರ ಅಥವಾ ಬಂಧನ ಕೇಂದ್ರದಲ್ಲಿ ರಾಜ್ಯ ಪೊಲೀಸರು ಇಟ್ಟಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ತಿಳಿಸಿದೆ.

ರೋಹಿಂಗ್ಯಾ ಸಮಸ್ಯೆ ಕುರಿತಂತೆ ಬಿಜೆಪಿ ಮುಖಂಡ ಅಶ್ವಿನಿ ಉಪಾಧ್ಯಾಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ವರ್ಷದೊಳಗೆ ಬಾಂಗ್ಲಾದೇಶಿಗರು, ರೋಹಿಂಗ್ಯಾಗಳು, ಕಾನೂನುಬಾಹಿರ ವಲಸಿಗರು ಮತ್ತು ನುಸುಳುಕೋರರನ್ನು ಗುರುತಿಸಿ ಅವರನ್ನು ಬಂಧಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿರುವಂತೆ ಕೋರಿ ಅಶ್ವಿನಿ ಉಪಾಧ್ಯಾಯ ಸುಪ್ರೀಂನಲ್ಲಿ ಮನವಿ ಸಲ್ಲಿಸಿದ್ದರು. ಇದಕ್ಕೂ ಮುನ್ನ ಉಪಾಧ್ಯಾಯ ಅವರ ಮನವಿಯು ನಿರ್ವಹಣೆಗೆ ಅರ್ಹವಾಗಿಲ್ಲ ಎಂದು ಕರ್ನಾಟಕ ಸರ್ಕಾರ ತಗಾದೆ ಎತ್ತಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿ ಅಫಿಡವಿಟ್ ಸಲ್ಲಿಸಿರುವ ರಾಜ್ಯ ಸರ್ಕಾರ, ಸುಪ್ರೀಂ ಕೋರ್ಟ್ ಹೊರಡಿಸುವ ಆದೇಶಕ್ಕೆ ಬದ್ಧವಾಗಿರುವುದಾಗಿ ತಿಳಿಸಿದೆ. ಅಲ್ಲದೆ,  ತನ್ನ ವ್ಯಾಪ್ತಿಗೆ ಒಳಪಡುವ ಯಾವುದೇ ಶಿಬಿರ ಅಥವಾ ಬಂಧನ ಕೇಂದ್ರದಲ್ಲಿ ರೋಹಿಂಗ್ಯಾಗಳಿಗೆ ಕರ್ನಾಟಕ ನೆಲೆ ಕಲ್ಪಿಸಿಲ್ಲ. ರಾಜ್ಯ ಸರ್ಕಾರವು 126 ರೋಹಿಂಗ್ಯಾಗಳನ್ನು ಪತ್ತೆ ಹಚ್ಚಿದ್ದು, ಈ ಸಂಬಂಧ ಸುಪ್ರೀಂ ಕೋರ್ಟ್ ಆದೇಶವನ್ನು ಚಾಚೂ ತಪ್ಪದೆ ಪಾಲಿಸಲಾಗುವುದು ಎಂದು ಗೃಹ ಇಲಾಖೆಯ ಅಧೀನ ಕಾರ್ಯದರ್ಶಿ ವನಜಾ ಕೆ ಎನ್ ಸಲ್ಲಿಸಿರುವ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ. 

ಅಗತ್ಯವೆನಿಸಿದರೆ ಮುಂದಿನ ಹಂತದಲ್ಲಿ ವಿಸ್ತೃತವಾದ ಅಫಿಡವಿಟ್ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ರಾಜ್ಯ ಸರ್ಕಾರವು ನ್ಯಾಯಾಲಯವನ್ನು ಕೋರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!