ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್ ನಿಯಮದಲ್ಲಿ ಬದಲಾವಣೆಗಳಿಲ್ಲ, ಮಾಸ್ಕ್ ಧರಿಸಿ ಹಬ್ಬ ಆಚರಿಸಿ: ಗೌರವ್ ಗುಪ್ತಾ

ಬೆಳಕಿನ ಹಬ್ಬ ದೀಪಾವಳಿ ಹಾಗೂ ಮಾರುಕಟ್ಟೆಗಳಲ್ಲಿ ಹಬ್ಬದ ಖರೀದಿ ವೇಳೆ ಜನದಟ್ಟಣೆ ಸೇರದೆ ರಾಜ್ಯ ಸರ್ಕಾರ ಪ್ರಕಟಿಸಿರುವ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆತ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಹಾಗೂ ಮಾರುಕಟ್ಟೆಗಳಲ್ಲಿ ಹಬ್ಬದ ಖರೀದಿ ವೇಳೆ ಜನದಟ್ಟಣೆ ಸೇರದೆ ರಾಜ್ಯ ಸರ್ಕಾರ ಪ್ರಕಟಿಸಿರುವ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆತ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಬ್ಬದ ಆಚರಣೆಗೆ ಪಾಲಿಕೆಯಿಂದ ಹೊಸ ಮಾರ್ಗಸೂಚಿ ಪ್ರಕಟಿಸುವುದಿಲ್ಲ. ಸರ್ಕಾರದ ಈಗಿರುವ ನಿಯಮಗಳನ್ನೇ ಎಲ್ಲರೂ ಪಾಲಿಸಬೇಕು. ನಗರದಲ್ಲಿ ಕೊರೋನಾ ಹತೋಟಿಯಲ್ಲಿದ್ದು, ಹೊಸ ಪ್ರಕರಣಗಳ ಸಂಖ್ಯೆ ಕಿಮೆಯಾಗಿದೆ. ಎರಡು ಡೋಸ್ ಲಸಿಕೆ ಪಡೆದವರು ಸುರಕ್ಷಿತ ಎಂದು ತಜ್ಞರು ತಿಳಿಸಿದರೂ ಸಾರ್ವಜನಿಕರು ಮಾಸ್ಕ್ ಧರಿಸದೇ ಓಡಾಡುವಂತಿಲ್ಲ, ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಾರೆಂದು ಎಚ್ಚರಿಸಿದರು,

ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಕುರಿತು ಕೇಂದ್ರ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ನಂತರ ಕೇಂದ್ರ ನೀಡುವ ಸೂಚನೆಯಂತೆ ಲಸಿಕೆಯನ್ನು ಮಕ್ಕಳಿಗೆ ಶಾಲೆಗಳಲ್ಲಿ ಅಥವಾ ಮನೆಗಳಲ್ಲಿ ನೀಡಬೇಕೇ ಎಂಬುದನ್ನು ಚರ್ಚಿಸಿ ನಿರ್ಧರಿಸುತ್ತೇವೆಂದು ಹೇಳಿದ್ದಾರೆ.

ಕೆ.ಆರ್.ವೃತ್ತ ಸೇರಿದಂತೆ ನಗರದ ವಿವಿಧೆಡೆ ಇರುವ ನೀರಿನ ಕಾರಂಜಿ, ಅಲ್ಲಿನ ವಿದ್ಯುತ್ ದೀಪಗಳು ಕಾರ್ಯಾರಂಭಗೊಳಿಸಲು ಬಿಬಿಎಂಪಿ ಕ್ರಮವಹಿಸತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT