ಪುನೀತ್ ರಾಜ್ ಕುಮಾರ್, ಮುರುಘಾ ಶ್ರೀ 
ರಾಜ್ಯ

ಪುನೀತ್ ಗೆ ಮರಣೋತ್ತರವಾಗಿ ಪ್ರತಿಷ್ಠಿತ 'ಬಸವಶ್ರೀ ಪ್ರಶಸ್ತಿ: ಶಿವಮೂರ್ತಿ ಮುರುಘಾ ಶರಣರು

ಕಳೆದ ಶುಕ್ರವಾರ ನಿಧನರಾದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರತಿಷ್ಠಿತ 'ಬಸವಶ್ರೀ ಪ್ರಶಸ್ತಿಗೆ  ಆಯ್ಕೆ ಮಾಡಲಾಗಿದೆ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ಚಿತ್ರದುರ್ಗ: ಕಳೆದ ಶುಕ್ರವಾರ ನಿಧನರಾದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರತಿಷ್ಠಿತ 'ಬಸವಶ್ರೀ ಪ್ರಶಸ್ತಿಗೆ  ಆಯ್ಕೆ ಮಾಡಲಾಗಿದೆ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಬಸವ ಜಯಂತಿಯಂದು ಮರಣೋತ್ತರವಾಗಿ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.

ಪುನೀತ್ ರಾಜ್ ಕುಮಾರ್ 'ಬಾಲನಟ, ನಾಯಕ ನಟ, ಹಿನ್ನೆಲೆ ಗಾಯಕ ಹಾಗೂ ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸಾಮಾಜಿಕ ಜಾಗೃತಿಯ ಪ್ರಚಾರಕರಾಗಿಯೂ ಸಮಾಜ ಸೇವೆ  ಸಲ್ಲಿಸಿದ್ದಾರೆ. ಮಾನವೀಯ ಮೌಲ್ಯಗಳನ್ನು ಹೊಂದಿದ್ದ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಶಸ್ತಿಯು 5 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ನವೆಂಬರ್ 10 ರಂದು ಶರಣರು ಪುನೀತ್ ರಾಜ್ ಕುಮಾರ್ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!