ಕೊಲೆಯಾದ ಯುವಕ ಅಭಿಷೇಕ್ 
ರಾಜ್ಯ

ಕಲಬುರಗಿ: ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಎದುರೇ ಪೊಲೀಸ್ ಪೇದೆ ಪುತ್ರನ ಬರ್ಬರ ಹತ್ಯೆ

ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಎದುರೇ ಪೊಲೀಸ್ ಪೇದೆಯೊಬ್ಬರ ಮಗನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗುರುವಾರ ನಡೆದಿದೆ.

ಕಲಬುರಗಿ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಎದುರೇ ಪೊಲೀಸ್ ಪೇದೆಯೊಬ್ಬರ ಮಗನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗುರುವಾರ ನಡೆದಿದೆ.

ವಿದ್ಯಾನಗರ ನಿವಾಸಿ, 27 ವರ್ಷದ ಅಭಿಷೇಕ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.‌ ಈತನ ತಂದೆ ಚಂದ್ರಕಾಂತ ಪೊಲೀಸ್ ಪೇದೆಯಾಗಿದ್ದಾರೆ.

ಅಭಿಷೇಕ್ ಎಂದಿನಂತೆ ಇಂದು ಬೆಳಿಗ್ಗೆ ಕೂಡ ಜಿಮ್ ಗೆ ಹೋಗುವುದಾಗಿ ಮನೆಯಿಂದ ಬೈಕ್ ತೆಗೆದುಕೊಂಡು ಬಂದಿದ್ದಾನೆ. ಈ ವೇಳೆ ಏಳೆಂಟು ಜನರ ದುಷ್ಕರ್ಮಿಗಳ ತಂಡ ಆತನನ್ನು ಬೆನ್ನಟ್ಟಿದ್ದಾರೆ. ಮುಖ್ಯರಸ್ತೆಯಿಂದಲೇ ದುಷ್ಕರ್ಮಿಗಳು ಬೆನ್ನಟ್ಟಿದ್ದರಿಂದ ಬಸ್ ನಿಲ್ದಾಣದೊಳಗೆ ಅಭಿಷೇಕ್ ಓಡಿ ಬಂದಿದ್ದಾನೆ.

ಆದರೂ ಕೂಡ ಬೆನ್ನುಬಿಡದ ದುಷ್ಕರ್ಮಿಗಳು, ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕ ಎದುರೇ ಮರಕಾಸ್ತ್ರಗಳಿಂದ ಅಭಿಷೇಕ್ ಮೇಲೆ ದಾಳಿ ಮಾಡಿದ್ದಾರೆ. ಮನಸೋ ಇಚ್ಛೆ ಕೊಚ್ಚಿ, ಹತ್ಯೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಘಟನೆಯ ಭೀಕರ ದೃಶ್ಯ ಕಂಡ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ.

ಸ್ಥಳಕ್ಕೆ ನಗರ ಉಪ ಪೊಲೀಸ್ ಆಯುಕ್ತ ಎ.ಶ್ರೀನಿವಾಸಲು, ಇನ್ ಸ್ಪೆಕ್ಟರ್ ಪಂಡಿತ ಸಗರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT