ರಾಜ್ಯ

ನ.8ರಿಂದ ಎಲ್‌ಕೆಜಿ, ಯುಕೆಜಿ ಆರಂಭ, ಕೋವಿಡ್ ಸುರಕ್ಷತಾ ಕ್ರಮ ಪಾಲನೆಗೆ ಕಟ್ಟುನಿಟ್ಟಿನ ಸೂಚನೆ: ಬಿ.ಸಿ ನಾಗೇಶ್

Srinivasamurthy VN

ಬೆಂಗಳೂರು: ಕೋವಿಡ್-19 ಸುರಕ್ಷತಾ ಕ್ರಮಗಳ ಪಾಲನೆಯೊಂದಿಗೆ ನವೆಂಬರ್ 8ರಿಂದ ರಾಜ್ಯದಲ್ಲಿ ಎಲ್‌ಕೆ‌ಜಿ ಮತ್ತು ಯುಕೆಜಿ ತರಗತಿಗಳ ಆರಂಭಕ್ಕೆ ಅನುಮತಿ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು. 

ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ದೈನಂದಿನ  ವೇಳಾಪಟ್ಟಿಯಂತೆ ‘ಅರ್ಧ ದಿನ’ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳ ಭೌತಿಕ ತರಗತಿಗಳನ್ನು ನಡೆಸಲು ಅನುಮತಿ ನೀಡಲಾಗಿದೆ. 

ಕೋವಿಡ್ 19 ಸೋಂಕು ದೃಢ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ  ಮಾತ್ರ ತರಗತಿಗಳನ್ನು ಆರಂಭಿಸಲು ಅನುಮತಿ ನೀಡಲಾಗಿದ್ದು,  ಭೌತಿಕ ತರಗತಿಗಳನ್ನು ಆರಂಭಿಸುವ ಮೊದಲ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಬೇಕು. ತರಗತಿಗಳಿಗೆ ಹಾಜರಾಗುವ ಮಕ್ಕಳ ಪಾಲಕರಿಂದ ಒಪ್ಪಿಗೆ ಪತ್ರ ತರುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. 

ಶಾಲೆಗೆ ಆಗಮಿಸುವ ಪ್ರತಿಯೊಂದು ಮಗುವಿನ ಆರೋಗ್ಯದ ಮೇಲೆ ನಿಗಾ ವಹಿಸಲು ಸೂಚಿಸಲಾಗಿದ್ದು, ಮಕ್ಕಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ಹೊರತುಪಡಿಸಿ ಬೇರೆಯವರಿಗೆ ಶಾಲೆ ಆವರಣದೊಳಗೆ ಪ್ರವೇಶ ನೀಡದಂತೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

SCROLL FOR NEXT