ರಾಜ್ಯ

ಕರಾವಳಿ ಸೇರಿ 11 ಜಿಲ್ಲೆಗಳಲ್ಲಿ ಇಂದೂ ಕೂಡ ಕಾಡಲಿದೆ ಮಳೆ, ಎಚ್ಚರಿಕೆ

Manjula VN

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಸೇರಿದಂತೆ 11 ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರಿನ ಶೃಂಗೇರಿ, ಕಳಸ, ಬಾಳೆಹೊನ್ನೂರು, ಮೂಡಿಗೆರೆ, ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರ, ದಕ್ಷಿಣ ಕನ್ನಡದ ಧರ್ಮಸ್ಥಳ, ಪುತ್ತೂರು ಮುಂತಾದೆಡೆ ಮಳೆ ಹೆಚ್ಚಾಗಿದೆ. ಕರಾವಳಿ, ದಕ್ಷಿಣ ಒಳನಾಡು, ಮಲೆನಾಡಿನಲ್ಲಿ ಇಂದು ಹಳದಿ ಅಲರ್ಟ್‌ ಘೋಷಿಸಲಾಗಿದ್ದು, ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

SCROLL FOR NEXT