ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾದಿಂದ ಐವರು ಸಾವು, ಬೆಂಗಳೂರಿನಲ್ಲಿ 148 ಸೇರಿ 224 ಮಂದಿಗೆ ಪಾಸಿಟಿವ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 224 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,89,713ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಐವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38107ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 148 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,52,680ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 317 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,43,487ಕ್ಕೆ ಏರಿಕೆಯಾಗಿದೆ. ಇನ್ನು 8090 ಸಕ್ರೀಯ ಪ್ರಕರಣಗಳಿವೆ.

SCROLL FOR NEXT