ಸಾಂದರ್ಭಿಕ ಚಿತ್ರ 
ರಾಜ್ಯ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಮುಂದಿನ ಮೂರು ದಿನ ಭಾರೀ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ .

ಬೆಂಗಳೂರು:  ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ, ಒಳನಾಡು ಮತ್ತು ಮೈಸೂರು ಭಾಗದಲ್ಲಿ ಮುಂದಿನ ಮೂರು ದಿನ ಮಳೆಯಾಗುವ  ಸಾಧ್ಯತೆಗಳಿವೆ. ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಸುರಿದ ಮಳೆಯಿಂದಾಗಿ ವಾಹನ ಸವಾರರು ಹೈರಾಣದರು.

ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಇತ್ತ ಉತ್ತರ ಕರ್ನಾಟಕ ಭಾಗದಲ್ಲಿ ಒಣ ಹವೆ ಮುಂದುವರಿಯಲ್ಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳು  ಸಹ ಕಡಿಮೆ. ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆಯುಂಟಾಗುತ್ತಿದೆ. ಇನ್ನುಳಿದಂತೆ ರಾಜ್ಯದಲ್ಲಿ ಚಳಿಗಾಲ  ಆರಂಭವಾಗುತ್ತಿದ್ದು, ಬೆಳಗಿನ ಜಾವ ಮತ್ತು  ಸಂಜೆ ಶೀತಗಾಳಿಯ ಅನುಭವವಾಗುತ್ತಿದೆ.

ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ಹಬ್ಬದ ಸಂಭ್ರಮದಲ್ಲಿ ಹೊರಗೆ  ಬಂದಿದ್ದ ಜನ ಮಳೆಯಲ್ಲಿ ಸಿಲುಕಿದರು. ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ವಾಹನ ಸವಾರರು ಫ್ಲೈ ಓವರ್ ಕೆಳಗೆ ಆಶ್ರಯ  ಪಡೆದಿದ್ರು.

ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದ್ದು, ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ