ರಾಜ್ಯ

ಕೆಎಸ್ಸಾರ್ಟಿಸಿ ಮಂಗಳೂರು - ಮಂತ್ರಾಲಯ ನಾನ್ ಎಸಿ ಸ್ಲೀಪರ್ ಬಸ್ ಸೇವೆ ಆರಂಭ

ಮಂಗಳೂರಿನಿಂದ ಮಂತ್ರಾಲಯಕ್ಕೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರ 970 ರೂಪಾಯಿ ಆಗಿರುತ್ತದೆ. ಈ ಸೇವೆಯನ್ನು ಆನ್ ಲೈನ್ ಮುಖಾಂತರವೂ ಬುಕ್ ಮಾಡಬಹುದು.

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇದೇ 10ರಿಂದ ಮಂಗಳೂರಿನಿಂದ ಮಂತ್ರಾಲಯಕ್ಕೆ ನಾನ್ ಎಸಿ ಸ್ಲೀಪರ್ ಬಸ್ ಸೇವೆ ಆರಂಭಿಸಲಿದೆ. 

ಮಂಗಳೂರಿನಿಂದ-ಉಡುಪಿ-ಕುಂದಾಪುರ-ಅಂಪಾರು-ಸಿದ್ದಾಪುರ-ತೀರ್ಥಹಳ್ಳಿ-ಶಿವಮೊಗ್ಗ-ಹೊನ್ನಾಳಿ-ಹರಿಹರ-ಹರಪನಹಳ್ಳಿ-ಹಗರಿಬೊಮ್ಮನಹಳ್ಳಿ-ಹೊಸಪೇಟೆ-ಕುಡುತಿನಿ-ಬಳ್ಳಾರಿ-ಆಲೂರು-ಅದೋನಿ ಮಾರ್ಗವಾಗಿ ಮಂತ್ರಾಲಯಕ್ಕೆ ಹಾಗೂ ಮಂತ್ರಾಲಯದಿಂದ ಇದೇ ಮಾರ್ಗವಾಗಿ ಮಂಗಳೂರಿಗೆ ಈ ಬಸ್ ಕಾರ್ಯಾಚರಣೆ ಮಾಡಲಿದೆ.

ಈ ಬಸ್ಸು ಮಂಗಳೂರು ನಿಲ್ದಾಣದಿಂದ ಸಂಜೆ 6 ಗಂಟೆಗೆ ಹೊರಟು ಮರು ದಿನ ಬೆಳಗ್ಗೆ 8.30ಕ್ಕೆ ಮಂತ್ರಾಲಯಕ್ಕೆ ತಲುಪಲಿದೆ. ಮರು ಪ್ರಯಾಣದಲ್ಲಿ ಮಂತ್ರಾಲಯದಿಂದ ಸಂಜೆ 6.30 ಕ್ಕೆ ಹೊರಟು ಮರುದಿನ ಬೆಳಗ್ಗೆ 9ಕ್ಕೆ ಮಂಗಳೂರು ತಲುಪಲಿದೆ. 

ಮಂಗಳೂರಿನಿಂದ ಮಂತ್ರಾಲಯಕ್ಕೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರ 970 ರೂಪಾಯಿ ಆಗಿರುತ್ತದೆ. ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ

ಭಾರತ-ಅಮೆರಿಕ ಸಂಬಂಧಗಳಿಗೆ ಹೊಸ ವೇಗ: ಪ್ರಧಾನಿ ಮೋದಿಗೆ ವ್ಯಾನ್ಸ್ ಕರೆ

KBC ವೇದಿಕೆಯಲ್ಲಿ ಆಮಿರ್ ಖಾನ್‌; ‘4ನೇ ಮದುವೆ ಯಾವಾಗ?’; ಕಾಲೆಳೆದ ನೆಟ್ಟಿಗರು, Amitabh bachchan ಶೋ Promoಗೆ ಕಮೆಂಟ್‌ಗಳ ಮಹಾಪೂರ..!

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ