ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳ್ಳಂಬೆಳಗ್ಗೆ ರೌಡಿ ಶೀಟರ್, ಡ್ರಗ್ ಪೆಡ್ಲರ್ ಗಳ ಮನೆಗಳ ಮೇಲೆ ಪೊಲೀಸ್ ದಾಳಿ

ರೌಡಿ ಶೀಟರ್, ಡ್ರಗ್ ಪೆಡ್ಲರ್ ಗಳ ಮನೆಗಳ ಮೇಲೆ ದಾಳಿ ಮಾಡುವ ಮೂಲಕ ಸಿಲಿಕಾನ್ ಸಿಟಿ ಪೊಲೀಸರು (Bengaluru Police) ಶಾಕ್ ನೀಡಿದ್ದಾರೆ.

ಬೆಂಗಳೂರು: ರೌಡಿ ಶೀಟರ್, ಡ್ರಗ್ ಪೆಡ್ಲರ್ ಗಳ ಮನೆಗಳ ಮೇಲೆ ದಾಳಿ ಮಾಡುವ ಮೂಲಕ ಸಿಲಿಕಾನ್ ಸಿಟಿ ಪೊಲೀಸರು (Bengaluru Police) ಶಾಕ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳು, ಡ್ರಗ್ಸ್ ಪೆಡ್ಲರ್‌ಗಳಿಗೆ ಬೆಂಗಳೂರಿನ ಪಶ್ಚಿಮ ವಿಭಾಗದ ಪೊಲೀಸರು ದಾಳಿ ಮಾಡುವ ಮೂಲಕ ಶಾಕ್ ಕೊಟ್ಟಿದ್ದು, ಸುಮಾರು 180 ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ ಮಾಡಿ ಶೋಧ ನಡೆಸಿದ್ದಾರೆ.

ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ಗಳು, ಡ್ರಗ್ಸ್ ಪೆಡ್ಲರ್‌ಗಳ ಮನೆಗಳ ಮೇಲೆ ಬೆಳಗ್ಗೆ ಐದು ಗಂಟೆಗೆ ಸುಮಾರು 600 ಪೊಲೀಸರು ದಾಳಿ ನಡೆಸಿದ್ದಾರೆ. ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ 180ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆದಿದ್ದು ರೌಡಿಶೀಟರ್ಸ್, ಡ್ರಗ್ಸ್ ಪೆಡ್ಲರ್‌ಗಳ ಮನೆಗಳಲ್ಲಿ ಶೋಧಕಾರ್ಯ ನಡೆದಿದೆ. 

ಪೊಲೀಸ್ ಮೂಲಗಳ ಪ್ರಕಾರ ಬೆಂಗಳೂರಿನ ಕಾಟನ್‌ಪೇಟೆ, ಚಾಮರಾಜಪೇಟೆ ಠಾಣೆ, ಬ್ಯಾಟರಾಯನಪುರ, ಜೆಜೆನಗರ, ಕೆ.ಪಿ.ಅಗ್ರಹಾರ ಠಾಣೆ, ಮಾಗಡಿ ರೋಡ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರಿಂದ ದಾಳಿ ನಡೆದಿದೆ. 123 ರೌಡಿಗಳು, ಡ್ರಗ್ಸ್ ಪೆಡ್ಲರ್ಸ್ ಠಾಣೆಗೆ ಕರೆತಂದು ವಾರ್ನ್ ಮಾಡಲಾಗಿದೆ. ಸಮನ್ಸ್ ನೀಡಿದ್ದರೂ ತಲೆಮರೆಸಿಕೊಂಡು ಓಡಾಡುತ್ತಿದ್ದರು. ಹೀಗಾಗಿ ಆರೋಪಿಗಳನ್ನು ಠಾಣೆಗೆ ಕರೆತಂದು ವಾರ್ನಿಂಗ್ ಮಾಡಿದ್ದೇವೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ರೌಡಿಗಳು, ಡ್ರಗ್ಸ್ ಪೆಡ್ಲರ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT