ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾದಿಂದ ನಾಲ್ವರು ಸಾವು: ಬೆಂಗಳೂರಿನಲ್ಲಿ 187 ಸೇರಿ 293 ಮಂದಿಗೆ ಪಾಸಿಟಿವ್!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 293 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,90,528ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 293 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,90,528ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ನಾಲ್ಕು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,122ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 187 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,53,177ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 323 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,44,422ಕ್ಕೆ ಏರಿಕೆಯಾಗಿದೆ. ಇನ್ನು 7,955 ಸಕ್ರೀಯ ಪ್ರಕರಣಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

SCROLL FOR NEXT