ಮಿಂಟೋ ಕಣ್ಣಾಸ್ಪತ್ರೆಯ 125 ನೇ ವಾರ್ಷಿಕೋತ್ಸವ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ 
ರಾಜ್ಯ

ಮುಂದಿನ ವಾರ ಮಕ್ಕಳಿಗೆ ಕೊರೋನಾ ಲಸಿಕೆ ಸಿಗುವ ನಿರೀಕ್ಷೆ: ಪುನೀತ್ ರಂತೆ ಯುವಜನತೆ ನೇತ್ರದಾನಕ್ಕೆ ಮುಂದಾಗಬೇಕು: ಸುಧಾಕರ್

ನೇತ್ರದಾನದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸಿ ಜನಾಂದೋಲನವಾಗುವಂತೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಬೆಂಗಳೂರು: ನೇತ್ರದಾನದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸಿ ಜನಾಂದೋಲನವಾಗುವಂತೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಮಿಂಟೋ ಕಣ್ಣಾಸ್ಪತ್ರೆಯ 125 ನೇ ವಾರ್ಷಿಕೋತ್ಸವ ಆಚರಣೆಯಲ್ಲಿ ಮಾತನಾಡಿದ ಸಚಿವರು, ಇತ್ತೀಚೆಗೆ ನಿಧನರಾದ ನಟ ಪುನೀತ್ ರಾಜ್‍ಕುಮಾರ್ ನೇತ್ರದಾನ ಮಾಡಿ ನಾಲ್ಕು ಜನರಿಗೆ ದೃಷ್ಟಿ ನೀಡಿದ್ದಾರೆ. ತಂತ್ರಜ್ಞಾನ ವಿಶಿಷ್ಟವಾಗಿ ಬೆಳೆದಿರುವುದರಿಂದ ಒಬ್ಬರು ನಾಲ್ಕು ಜನರಿಗೆ ದೃಷ್ಟಿ ನೀಡಲು ಸಾಧ್ಯವಾಗುತ್ತದೆ. ದೇಶದಲ್ಲಿ 3-4 ಕೋಟಿ ಜನರಿಗೆ ಅಂಧತ್ವ ಇದೆ. ಆದ್ದರಿಂದ ದಾನಿಗಳ ಸಂಖ್ಯೆ ಹೆಚ್ಚಬೇಕಿದೆ. ಮರಣ ಹೊಂದಿದ ನಂತರವೂ ನಾಲ್ಕು ಜನರಿಗೆ ದೃಷ್ಟಿ ನೀಡಿ ಅವರಿಗೆ ಜಗತ್ತು ನೋಡಲು ಅವಕಾಶ ನೀಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಅಂಗಾಂಗ ದಾನಕ್ಕೆ ಪ್ರತಿಜ್ಞೆ ಮಾಡಿದ್ದಾರೆ. ನಾನು ಕೂಡ ಕಳೆದ ವರ್ಷವೇ ನೇತ್ರದಾನ ಮಾಡಲು ಪ್ರತಿಜ್ಞೆ ಮಾಡಿದ್ದೇನೆ. ಇದನ್ನು ಆಂದೋಲನದಂತೆ ನಡೆಸಿ ನೇತ್ರದಾನದ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಕೋವಿಡ್ ಸಮಯದಲ್ಲಿ ಮಿಂಟೋ, ವಿಕ್ಟೋರಿಯಾ ಆಸ್ಪತ್ರೆಯನ್ನು ಮೀಸಲಿಡಲಾಗಿತ್ತು. ಆದರೆ ಈಗ ಎಲ್ಲ ಬಗೆಯ ಚಿಕಿತ್ಸೆ ನೀಡಲಾಗುತ್ತಿದೆ. ಜನರು ಧೈರ್ಯವಾಗಿ ಬಂದು ಇತರೆ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಬಹುದು ಎಂದರು. 

ಅನೇಕ ವೈದ್ಯರು, ಶುಶ್ರೂಷಕರು, ವೈದ್ಯಕೀಯೇತರ ಸಿಬ್ಬಂದಿಯ ಶ್ರಮದಿಂದಾಗಿ ಮಿಂಟೋ ಕಣ್ಣಾಸ್ಪತ್ರೆಯು 125 ನೇ ವರ್ಷಕ್ಕೆ ಕಾಲಿಟ್ಟಿದೆ. ಇಂತಹ ಸಂಸ್ಥೆ ಇರುವುದು ರಾಜ್ಯಕ್ಕೆ ಹೆಮ್ಮೆಯ ವಿಚಾರ. 1896 ರಲ್ಲಿ ಡಿಸ್ಪೆನ್ಸರಿಯಾಗಿ ಆರಂಭವಾದ ಸಂಸ್ಥೆ 125 ವರ್ಷದವರೆಗೂ ಸೇವೆ ನೀಡಿದೆ. ಪ್ಲೇಗ್ ನಿಂದ ಆರಂಭವಾಗಿ ಇತ್ತೀಚೆಗೆ ಕೋವಿಡ್ ತಡೆಗಟ್ಟುವವರೆಗೂ ಈ ಸಂಸ್ಥೆ ಕಾರ್ಯನಿರ್ವಹಿಸಿದೆ. ಇಂದು ಒಪಿಡಿಗೆ ಸುಮಾರು 800 ರೋಗಿಗಳು ಬರುತ್ತಿದ್ದಾರೆ. ವರ್ಷಕ್ಕೆ ಸುಮಾರು 10 ಸಾವಿರ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದರು.

ಮಕ್ಕಳಿಗೆ ಕೋವಿಡ್ ಲಸಿಕೆ:
ರಾಜ್ಯದಲ್ಲಿ ಕೊರೊನಾ ಲಸಿಕೆಯ ಮೊದಲ ಡೋಸ್ 89% ಹಾಗೂ ಎರಡನೇ ಡೋಸ್ 48% ರಷ್ಟು ಪ್ರಗತಿ ಕಂಡಿದೆ. ಎರಡನೇ ಡೋಸ್ ಪಡೆಯಲು ಜನರು ಉದಾಸೀನ ಮಾಡಬಾರದು. ಕೋವಿಡ್ ವಿರುದ್ಧ ಸಂಪೂರ್ಣ ರೋಗ ನಿರೋಧಕ ಶಕ್ತಿ ಬರಲು ಎರಡೂ ಡೋಸ್ ಪಡೆಯಬೇಕು. ಕೋವಿಡ್ ಸಂಪೂರ್ಣ ನಿರ್ಮೂಲನೆಯಾಗುವವರೆಗೂ ಎಚ್ಚರವಾಗಿರಬೇಕು ಎಂದರು.

ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಮಕ್ಕಳ ಲಸಿಕೆ ನೀಡಲಿದೆ. ಮಕ್ಕಳಲ್ಲಿ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುವುದು. ಆರೋಗ್ಯ ನಂದನ ಕಾರ್ಯಕ್ರಮದಡಿ ಈಗಾಗಲೇ ಆರೋಗ್ಯ ಶಿಬಿರ ಮಾಡಿ ಪಟ್ಟಿ ಮಾಡಲಾಗಿದೆ. ಮುಂದಿನ ವಾರ ಲಸಿಕೆಯನ್ನು ನಿರೀಕ್ಷಿಸುತ್ತಿದ್ದೇವೆ. ಆರೂಮುಕ್ಕಾಲು ಕೋಟಿ ಲಸಿಕೆಯನ್ನು ರಾಜ್ಯದಲ್ಲಿ ನೀಡಲಾಗಿದೆ. ಲಸಿಕೆ ವಿತರಣೆ ಈಗ ಕಷ್ಟದ ವಿಚಾರವಲ್ಲ ಎಂದರು.

ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಮಕ್ಕಳ ಲಸಿಕೆ ನೀಡಲಿದೆ. ಆರೋಗ್ಯ ನಂದನ ಕಾರ್ಯಕ್ರಮದಡಿ ಈಗಾಗಲೇ ಆರೋಗ್ಯ ಶಿಬಿರ ಮಾಡಿ ಪಟ್ಟಿ ಮಾಡಲಾಗಿದೆ. ಮುಂದಿನ ವಾರ ಲಸಿಕೆಯನ್ನು ನಿರೀಕ್ಷಿಸುತ್ತಿದ್ದೇವೆ. ಆರೂಮುಕ್ಕಾಲು ಕೋಟಿ ಲಸಿಕೆಯನ್ನು ರಾಜ್ಯದಲ್ಲಿ ನೀಡಲಾಗಿದೆ. ಲಸಿಕೆ ವಿತರಣೆ ಈಗ ಕಷ್ಟದ ವಿಚಾರವಲ್ಲ ಎಂದರು. ಮಿಂಟೋ ಕಣ್ಣಾಸ್ಪತ್ರೆಯ 125ನೇ ವಾರ್ಷಿಕೋತ್ಸವ ಆಚರಣೆಯಲ್ಲಿ ಮಾತನಾಡಿದ ಸುಧಾಕರ್ ಅವರು ನೇತ್ರದಾನದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸಿ ಜನಾಂದೋಲನವಾಗುವಂತೆ ಮಾಡಬೇಕು ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ