ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು ಚುನಾವಣೆ: ಆಯೋಗ

ಕರ್ನಾಟಕ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. 

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. 

ರಾಜ್ಯ ಮೇಲ್ಮನೆಯ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಿಲಿದೆ. ನವೆಂಬರ್ 16ರಂದು ಮೇಲ್ಮನೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು, ನವೆಂಬರ್ 23ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ. 

ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು ನವೆಂಬರ್ 26 ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಡಿಸೆಂಬರ್ 10 ಶುಕ್ರವಾರ ಬೆಳಗ್ಗೆ 8 ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಕೋಲಾರ, ಕೊಡಗು ಮತ್ತು ಮೈಸೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರಗಳಿಂದ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ