ರಾಜ್ಯ

ರಾಜ್ಯದಲ್ಲಿ ಕೊರೋನಾ ಮೊನ್ನೆಗಿಂತ ನಿನ್ನೆ, ನಿನ್ನೆಗಿಂತ ಇಂದು ಹೆಚ್ಚಳ: ಬೆಂಗಳೂರಿನಲ್ಲಿ 176 ಸೇರಿ 328 ಪ್ರಕರಣ; 9 ಸಾವು

Srinivasamurthy VN

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೋನಾ ಆರ್ಭಟ ಇಂದು ಮತ್ತೆ ಹೆಚ್ಚಳವಾಗಿದ್ದು, ಮೊನ್ನೆಗಿಂತ ನಿನ್ನೆ, ನಿನ್ನೆಗಿಂತ ಹೊಸ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 328 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ 29,90,856ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 176 ಹೊಸ ಪ್ರಕರಣಗಳು ವರದಿಯಾಗಿದ್ದು, ಹಾಸನದಲ್ಲಿ 29, ಮೈಸೂರಿನಲ್ಲಿ 15, ಬೆಂಗಳೂರು ಗ್ರಾಮಾಂತರ ಮತ್ತು ಶಿವಮೊಗ್ಗದಲ್ಲಿ ತಲಾ 11 ಹೊಸ ಪ್ರಕರಣಗಳು ವರದಿಯಾಗಿದೆ. ಬಾಗಲಕೋಟೆ, ಬೀದರ್, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಯಾವುದೇ ಹೊಸ ಪ್ರಕರಣ ವರದಿಯಾಗಿಲ್ಲ. 

ಅಂತೆಯೇ ಇಂದು 9 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ಗೆ ಬಲಿಯಾದವರ ಸಂಖ್ಯೆ 38,131ಕ್ಕೆ ಏರಿಕೆಯಾಗಿದೆ.

ಇಂದು ರಾಜ್ಯದಲ್ಲಿ 247 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಕೋವಿಡ್ ನಿಂದ ಗುಣಮುಖರಾದವರ ಒಟ್ಟಾರೆ ಸಂಖ್ಯೆ 29,44,669ಕ್ಕೆ ಏರಿಕೆಯಾಗಿದೆ. ಪ್ರಸ್ತುತ ರಾಜ್ಯದಲ್ಲಿ 8027 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದಲ್ಲಿನ ಪಾಸಿಟಿವಿಟಿ ದರ ಶೇ.0.27ರಷ್ಟು ಮತ್ತು ಕೋವಿಡ್ ಮರಣ ಪ್ರಮಾಣ ದರ ಶೇ.2.74ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
 

SCROLL FOR NEXT