ಸಂಗ್ರಹ ಚಿತ್ರ 
ರಾಜ್ಯ

2020ರಲ್ಲಿ 11,716 ಉದ್ಯಮಿಗಳು ಆತ್ಮಹತ್ಯೆಗೆ ಶರಣು; ಕರ್ನಾಟಕದಲ್ಲೇ ಅತೀ ಹೆಚ್ಚು!

ಕೊರೋನಾ ಲಾಕ್ಡೌನ್ ಕಾರಣದಿಂದ ದೇಶದಾದ್ಯಂತ ಉದ್ಯಮಗಳು ಸ್ಥಗಿತಗೊಂಡಿದ್ದರಿಂದ ಉದ್ಯಮಿಗಳು ಇನ್ನಿಲ್ಲದ ಸಂಕಷ್ಟಕ್ಕೆ ಸಿಲುಕಿದ್ದರು. ಇದರಿಂದಾಗಿ 2020ರಲ್ಲಿ ಸುಮಾರು 11,716 ಉದ್ಯಮಿಗಳು ಆತ್ಮಹತ್ಯೆಯ ಹಾದಿ ತುಳಿದಿದ್ದಾರೆಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್'ಸಿಆರ್'ಬಿ) ವರದಿ ನೀಡಿದೆ.

ಬೆಂಗಳೂರು: ಕೊರೋನಾ ಲಾಕ್ಡೌನ್ ಕಾರಣದಿಂದ ದೇಶದಾದ್ಯಂತ ಉದ್ಯಮಗಳು ಸ್ಥಗಿತಗೊಂಡಿದ್ದರಿಂದ ಉದ್ಯಮಿಗಳು ಇನ್ನಿಲ್ಲದ ಸಂಕಷ್ಟಕ್ಕೆ ಸಿಲುಕಿದ್ದರು. ಇದರಿಂದಾಗಿ 2020ರಲ್ಲಿ ಸುಮಾರು 11,716 ಉದ್ಯಮಿಗಳು ಆತ್ಮಹತ್ಯೆಯ ಹಾದಿ ತುಳಿದಿದ್ದಾರೆಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್'ಸಿಆರ್'ಬಿ) ವರದಿ ನೀಡಿದೆ.

ಈ ಪಟ್ಟಿಯಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿರುವುದು ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ. 2019ಕ್ಕೆ ಹೋಲಿಕೆ ಮಾಡಿದರೆ, ಪ್ರಸಕ್ತ ಸಾಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಗಳ ಸಂಖ್ಯೆಯಲ್ಲಿ ಶೇ.29ದಷ್ಟು ಏರಿಕೆಯಾಗಿದೆ.

ಕರ್ನಾಟಕದಲ್ಲಿ ಅತೀ ಹೆಚ್ಚು ಜನ ಉದ್ಯಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, 2020ರಲ್ಲಿ 1,772 ಜನರು ಸಾವಿನ ಕದ ತಟ್ಟಿದ್ದಾರೆ. 2019ರ ಸಂಖ್ಯೆಗೆ ಹೋಲಿಕೆ ಮಾಡಿದರೆ, 2020ರಲ್ಲಿ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆಯು ಶೇ.103ರಷ್ಟು ಏರಿಕೆ ಕಂಡಿದೆ.

2019 ರಲ್ಲಿ, ರಾಜ್ಯವು 875 ಉದ್ಯಮಿಗಳ ಆತ್ಮಹತ್ಯೆಗೆ ಶರಣಾಗಿದ್ದರು. ಇದರಲ್ಲಿ 175 ಮಾರಾಟಗಾರರು, 204 ವ್ಯಾಪಾರಿಗಳು ಮತ್ತು 496 ಇತರೆ ವ್ಯಾಪಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2020ರಲ್ಲಿ 592 ಮಾರಾಟಗಾರರು, 968 ವ್ಯಾಪಾರಿಗಳು ಮತ್ತು 212 ಉದ್ಯಮಿಗಳು ಇತರೆ ವ್ಯಾಪಾರಸ್ಥರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದರೊಂದಿಗೆ ಒಟ್ಟು 1,772 ಮಾಡಿಕೊಂಡಂತಾಗಿದೆ. 1,772 ಪೈಕಿ 1,699 ಮಂದಿ ಪುರುಷಕರು ಹಾಗೂ 73 ಮಂದಿ ಮಹಿಳೆಯರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ವರದಿಯಿಂದ ತಿಳಿದುಬಂದಿದೆ.

ಇದರೊಂದಿಗೆ 2019 ರಲ್ಲಿ ದೇಶದ ಉದ್ಯಮ ಸಮುದಾಯದಿಂದ ಆತ್ಮಹತ್ಯೆ ಮಾಡಿಕೊಂಡ ಒಟ್ಟು ಸಂಖ್ಯೆಯಲ್ಲಿ ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ 2020 ರಲ್ಲಿ ಅಗ್ರ ಸ್ಥಾನಕ್ಕೆ ಏರಿದೆ ಎಂದು ಎನ್‌ಸಿಆರ್‌ಬಿ ಅಂಕಿಅಂಶಗಳು ಬಹಿರಂಗಪಡಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT