ರಾಜ್ಯ

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 169 ಸೇರಿ 286 ಪ್ರಕರಣ ಪತ್ತೆ, 7 ಸಾವು

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 286 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,91,142ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಮಹಾಮಾರಿಗೆ ಇಂದು ಏಳು ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 38,138ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 169 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,53,522ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಮೂವರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 289 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,44,958ಕ್ಕೆ ಏರಿಕೆಯಾಗಿದೆ. ಇನ್ನು 8,017 ಸಕ್ರೀಯ ಪ್ರಕರಣಗಳಿವೆ.

SCROLL FOR NEXT