ನಟ ರಜನಿಕಾಂತ್ 
ರಾಜ್ಯ

ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ರಜನಿಕಾಂತ್ ಸಂತಾಪ; ಅಪ್ಪು ಅಭಿಮಾನಿಗಳ ಆಕ್ರೋಶ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ನಟ ರಜನಿಕಾಂತ್ ವಿರುದ್ಧ ಅಪ್ಪು ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ನಟ ರಜನಿಕಾಂತ್ ವಿರುದ್ಧ ಅಪ್ಪು ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಇಹಲೋಕ ತ್ಯಜಿಸಿದ ಸಂದರ್ಭದಲ್ಲಿ ರಜನಿಕಾಂತ್​ ಅವರು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಹಾಗಾಗಿ ಅವರು ಬೆಂಗಳೂರಿಗೆ ಬರಲು ಸಾಧ್ಯವಾಗಿರಲಿಲ್ಲ. ಈಗ ಅವರು ಚೇತರಿಸಿಕೊಂಡಿದ್ದು, ಪುನೀತ್​ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಆದರೆ, ಇದಕ್ಕೆ ಮಗಳ ಹೂಟೆ ಆ್ಯಪ್'ನ್ನು ರಜನಿಕಾಂತ್ ಬಳಕೆ ಮಾಡಿರುವುದಕ್ಕೆ ರಜನಿಕಾಂತ್ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ

ಪುತ್ರಿಯ ಹೂಟೆ ಆ್ಯಪ್ ಆ್ಯಪ್​ ಪ್ರಮೋಟ್​ ಮಾಡುವ ಸಲುವಾಗಿ ಅದರಲ್ಲೇ ಪುನೀತ್​ಗೆ ರಜನಿಕಾಂತ್​ ಶ್ರದ್ಧಾಂಜಲಿ ಅರ್ಪಿಸಿದ್ದಾರೆಂದು ನೆಟ್ಟಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

ರಜನಿಕಾಂತ್​ ಅವರಿಗೆ ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾದ ದಿನವೇ ಹೂಟೆ ಆ್ಯಪ್ ಲಾಂಚ್​ ಆಗಿತ್ತು. ಇದೊಂದು ವಾಯ್ಸ್​ ಬೇಸ್ಡ್​ ಸೋಶಿಯಲ್​ ಮೀಡಿಯಾ ಆ್ಯಪ್​ ಆಗಿದ್ದು, ಧ್ವನಿ ಮೂಲಕ ನಮ್ಮ ಆಲೋಚನೆಗಳನ್ನು ಹಂಚಿಕೊಳ್ಳಬಹುದು. ಇದರ ಮೂಲಕವೇ ಪುನೀತ್​ಗೆ ರಜನಿಕಾಂತ್​ ಶ್ರದ್ಧಾಂಜಲಿ ಅರ್ಪಿಸಿ, ಅದರ ಲಿಂಕ್​ ಅನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

‘ಪುನೀತ್​ ನನ್ನ ಕಣ್ಣಮುಂದೆ ಬೆಳೆದ ಪ್ರೀತಿಪಾತ್ರ ಮತ್ತು ಪ್ರತಿಭಾವಂತ ಮಗು. ಯಶಸ್ಸಿನ ಉತ್ತುಂಗದಲ್ಲಿ ಇರುವಾಗಲೇ ನಮ್ಮನ್ನು ಅವರು ಅಗಲಿದರು. ಕನ್ನಡ ಚಿತ್ರರಂಗಕ್ಕೆ ಇದು ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಮಾತುಗಳೇ ಬರುತ್ತಿಲ್ಲ. ಪುನೀತ್​ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ರಜನಿಕಾಂತ್​ ಹೇಳಿದ್ದಾರೆ.

ಆದರೆ, ಇದಕ್ಕಾಗಿ ಅವರು ಬೇರೆಲ್ಲಾ ಸೋಶಿಯಲ್​ ಮೀಡಿಯಾ ಬಿಟ್ಟು, ಪುತ್ರಿಯ ಹೂಟೆ ಆ್ಯಪ್​ ಬಳಸಿರುವುದು ಸ್ವಾರ್ಥ ಮತ್ತು ಲಾಭದ ಉದ್ದೇಶದಿಂದ ಎಂದು ಜನರು ಟೀಕಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT