ಸಹಕಾರ ಇಲಾಖೆ ಸಚಿವ ಎಸ್ ಟಿ ಸೋಮಶೇಖರ್ 
ರಾಜ್ಯ

ನವೆಂಬರ್ 14ರಿಂದ ನಡೆಯಬೇಕಿದ್ದ ಸಹಕಾರ ಸಪ್ತಾಹ ತಾತ್ಕಾಲಿಕವಾಗಿ ಮುಂದೂಡಿಕೆ

ಸಹಕಾರಿ ಸಪ್ತಾಹವನ್ನು ಯಶಸ್ವಿವಾಗಿ ಆಚರಿಸಲು ಪ್ರತಿ ವರ್ಷ ನವೆಂಬರ್ 14ರಂದು  ಹಮ್ಮಿಕೊಳ್ಳಲಾಗುತ್ತಿತ್ತು. ರಾಜ್ಯದ ನಾನಾ ಜಿಲ್ಲೆಗಳಲ್ಲಿ 7 ದಿನ ಸಹಕಾರ ಸಪ್ತಾಹ ಹಮ್ಮಿಕೊಳ್ಳುವುದರ ಜೊತೆಗೆ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಮುಖ್ಯಮಂತ್ರಿಗಳು ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದರು.

ಬೆಂಗಳೂರು: ಸಹಕಾರಿ ಸಪ್ತಾಹವನ್ನು ಯಶಸ್ವಿವಾಗಿ ಆಚರಿಸಲು ಪ್ರತಿ ವರ್ಷ ನವೆಂಬರ್ 14ರಂದು ಹಮ್ಮಿಕೊಳ್ಳಲಾಗುತ್ತಿತ್ತು. ರಾಜ್ಯದ ನಾನಾ ಜಿಲ್ಲೆಗಳಲ್ಲಿ 7 ದಿನ ಸಹಕಾರ ಸಪ್ತಾಹ ಹಮ್ಮಿಕೊಳ್ಳುವುದರ ಜೊತೆಗೆ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಮುಖ್ಯಮಂತ್ರಿಗಳು ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದರು.

ಈ ವರ್ಷ ಕೂಡ ನವೆಂಬರ್ 14ರ ಭಾನುವಾರ ಬೆಂಗಳೂರಿನಲ್ಲಿ, ನಂತರ ನಾನಾ ಜಿಲ್ಲೆಗಳಲ್ಲಿ ಸಹಕಾರ ಸಪ್ತಾಹ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು.

ಆದರೆ 20 ಸ್ಥಳೀಯ ಸಂಸ್ಥೆಗಳಿಂದ 25 ವಿಧಾನಪರಿಷತ್ ಸ್ಥಾನಗಳಿಗೆ ಡಿ.10ರಂದು ವಿಧಾನಪರಿಷತ್ ಚುನಾವಣೆ ನಡೆಯುವುದರಿಂದ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ ನವೆಂಬರ್‌ 14ರಿಂದ ನಡೆಯಬೇಕಿದ್ದ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!