ಹಳಿ ತಪ್ಪಿದ ಕಣ್ಣೀರು-ಬೆಂಗಳೂರು ಎಕ್ಸ್ ಪ್ರೆಸ್ 
ರಾಜ್ಯ

ಏಕಾಏಕಿ ಟ್ರ್ಯಾಕ್ ಮೇಲೆ ಉರುಳಿ ಕಲ್ಲುಬಂಡೆ; ಹಳಿ ತಪ್ಪಿದ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್; ಪ್ರಯಾಣಿಕರು ಬಚಾವ್

ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ 5 ಬೋಗಿಗಳು ಹಳಿ ತಪ್ಪಿದ ಘಟನೆ ಮುಂಜಾನೆ 3.50ರ ಸಮಯದಲ್ಲಿ ನಡೆದಿದೆ.

ಬೆಂಗಳೂರು: ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ 5 ಬೋಗಿಗಳು ಹಳಿ ತಪ್ಪಿದ ಘಟನೆ ಮುಂಜಾನೆ 3.50ರ ಸಮಯದಲ್ಲಿ ನಡೆದಿದೆ.

ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲು ತೊಪ್ಪೂರು-ಶಿವಡಿ ಬಳಿ ಸಂಚರಿಸುವಾಗ ಏಕಾಏಕಿ ಕಲ್ಲುಬಂಡೆ ಉರುಳಿಬಿದ್ದ ಪರಿಣಾಮ ರೈಲಿನ 5 ಬೋಗಿಗಳು ಹಳಿ ತಪ್ಪಿವೆ. ಸದ್ಯ ರೈಲಿನ ವೇಗ ಹೆಚ್ಚು ಇರಲಿಲ್ಲ. ಹೀಗಾಗಿ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಅಪಘಾತದ ಬಳಿಕ ರೈಲಿನಲ್ಲಿದ್ದ ಪ್ರಯಾಣಿಕರಲ್ಲಿ ಆತಂಕ ಮನೆ ಮಾಡಿದೆ. ಇಂದು ಮುಂಜಾನೆ 3.50ರ ಸುಮಾರಿಗೆ ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ 5 ಬೋಗಿಗಳು ಹಳಿ ತಪ್ಪಿವೆ ಎಂದು ನೈಋತ್ಯ ರೈಲ್ವೆ (ಎಸ್‌ಡಬ್ಲ್ಯುಆರ್) ಹೇಳಿಕೆ ನೀಡಿದೆ.

ಬೆಂಗಳೂರು ವಿಭಾಗದ ತೊಪ್ಪೂರು-ಶಿವಡಿ ಮಾರ್ಗವಾಗಿ ರೈಲು ಹಾದು ಹೋಗುತ್ತಿದ್ದಾಗ ಏಕಾಏಕಿ ಬಂಡೆಗಳು ಬೀಳಲಾರಂಭಿಸಿವೆ. ಇದರಿಂದಾಗಿ ರೈಲು ಹಳಿ ತಪ್ಪಿದೆ. ಆದರೆ, ರೈಲಿನಲ್ಲಿದ್ದ ಎಲ್ಲಾ 2348 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.

ರೈಲಿನಲ್ಲಿದ್ದ ಎಲ್ಲಾ 2,348 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ವ್ಯಾಪ್ತಿಯಲ್ಲಿ ರೈಲು ಹಳಿ ತಪ್ಪಿದ್ದು, ಯಾವುದೇ ಅನಾಹುತವಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 8 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

Toxic: ಭರ್ಜರಿ ಓಪನಿಂಗ್, ಮೊದಲ ದಿನವೇ ಪಠಾಣ್, ಅನಿಮಲ್ ದಾಖಲೆ ಉಡೀಸ್, ಸಂಜೆ ವೇಳೆಗೆ 70 ಕೋಟಿ ಗೂ ಅಧಿಕ ಕಲೆಕ್ಷನ್!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!