ರಾಜ್ಯ

ಯಾದಗಿರಿ: ಆಟೋ, ಲಾರಿ ನಡುವೆ ಭೀಕರ ಅಪಘಾತ;  ಎರಡೂವರೆ ವರ್ಷದ ಮಗು ಸೇರಿ ಮೂವರ ದುರ್ಮರಣ

Shilpa D

ಯಾದಗಿರಿ: ಆಟೋ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿ ನಗರದ ಮುದ್ನಾಳ್ ಕ್ರಾಸ್ ಬಳಿ ಸಂಭವಿಸಿದೆ.

ಎರಡೂವರೆ ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಟೋದಲ್ಲಿದ್ದ 6 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಯಾದಗಿರಿ ತಾಲೂಕಿನ ಕಂಚಗಾರಹಳ್ಳಿ ತಾಂಡಾಗೆ ಹೋಗುತ್ತಿದ್ದರು. ಈ ವೇಳೆ ಭೀಕರ ಅಪಘಾತ ನಡೆದಿದೆ.

ಆಟೋ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆಟೋ ಚಾಲಕ,  ಮಗು ಕ್ರಿಶ್ ಹಾಗೂ ಮಗುವಿನ ಅಜ್ಜ ಸಾವನ್ನಪ್ಪಿದ್ದಾರೆ ಆಟೋ ಚಾಲಕ ಲಕ್ಷ್ಮಣ ಕಂಚಗಾರಹಳ್ಳಿ ತಾಂಡ ನಿವಾಸಿ, ಶಹಾಪುರ ತಾಲೂಕಿನ ಹೋತಪೇಟೆ ನಿವಾಸಿ ಜಯರಾಜ್ ಹಾಗೂ  ಮಗು ದುರಂತದಲ್ಲಿ ಮರಣ ಹೊಂದಿದ್ದಾರೆ.

ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇನ್ನು 6 ಜನರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯಾದಗಿರಿ ಸಂಚಾರಿ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

SCROLL FOR NEXT