ಶಾಸಕ ರಾಮಣ್ಣ ಲಮಾಣಿ 
ರಾಜ್ಯ

ಗದಗ: ಭರವಸೆ ಈಡೇರಿಕೆಗಾಗಿ 2 ವರ್ಷಗಳಿಂದ ಕಾಯುತ್ತಿದ್ದ ವೃದ್ಧನನ್ನು ಭೇಟಿ ಮಾಡಿದ ಶಾಸಕ, ಮತ್ತೆ ಭರವಸೆ

ಭರವಸೆ ಈಡೇರಿಕೆಗಾಗಿ 2 ವರ್ಷಗಳಿಂದ ಕಾಯುತ್ತಿದ್ದ ವೃದ್ಧನನ್ನು ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಭೇಟಿ ಮಾಡಿದ್ದು ಶೀಘ್ರವೇ ಮನೆಯನ್ನು ನಿರ್ಮಿಸಿಕೊಡುವ ಭರವಸೆ ನೀಡಿದ್ದಾರೆ. 

ಗದಗ: ಭರವಸೆ ಈಡೇರಿಕೆಗಾಗಿ 2 ವರ್ಷಗಳಿಂದ ಕಾಯುತ್ತಿದ್ದ ವೃದ್ಧನನ್ನು ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ  ಭೇಟಿ ಮಾಡಿದ್ದು ಶೀಘ್ರವೇ ಮನೆಯನ್ನು ನಿರ್ಮಿಸಿಕೊಡುವ ಭರವಸೆ ನೀಡಿದ್ದಾರೆ. 

ಎರಡು ವರ್ಷಗಳ ಹಿಂದೆ ನೀಡಿದ್ದ ಭರವಸೆಯನ್ನು ಈಡೇರಿಸುವಲ್ಲಿ ಸ್ಥಳೀಯ ಸರ್ಕಾರ ಹಾಗೂ ಶಾಸಕರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಆರೋಪಿಸಿ ಲಕ್ಷ್ಮೇಶ್ವರ ಟೌನ್ ನ ಹುಬ್ಬಳ್ಳಿ ರಸ್ತೆಯಲ್ಲಿ 70-80 ಆಸುಪಾಸಿನ ವಯಸ್ಸಿನ ವೃದ್ಧ ಪ್ರತಿಭಟನೆ ನಡೆಸುತ್ತಿದ್ದರು. 

ಇದಕ್ಕೂ ಮುನ್ನ ಭಾನುವಾರ ಸಂಜೆ ಪ್ರತಿಭಟನೆ ನಡೆಸುತ್ತಿದ್ದ ವ್ಯಕ್ತಿಯನ್ನು ಭೇಟಿ ಮಾಡಿದ್ದ ಸ್ಥಳೀಯ ಅಧಿಕಾರಿಗಳು ಪ್ರತಿಭಟನೆ ಅಂತ್ಯಗೊಳಿಸುವಂತೆ ಮನವಿ ಮಾಡಿದ್ದರು. ಈ ಬಳಿಕ ಶಾಸಕರು ತಹಶಿಲ್ದಾರ್ ಬ್ರಮರಾಂಭ ಗುಬ್ಬಿಶೆಟ್ಟಿ ಹಾಗೂ ಇತರ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಶೀಘ್ರವೇ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲಾಗುವುದು ಎಂಬ ಭರವಸೆ ನೀಡಿದ್ದಾರೆ.

ಫಕೀರಪ್ಪ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಾನು ಈಗಲೂ ಸರ್ಕಾರವನ್ನು ನಂಬುತ್ತೇನೆ, ಶಾಸಕರು ನನಗೆ ಸಹಾಯ ಮಾಡುವ ಭರವಸೆ ನೀಡಿದ್ದಾರೆ. ನನ್ನನ್ನು ಭೇಟಿ ಮಾಡಲು ಬಂದ ಎಲ್ಲರಿಗೂ ನನ್ನ ಧನ್ಯವಾದಗಳು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT