ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 163 ಸೇರಿ 255 ಮಂದಿಗೆ ಪಾಸಿಟಿವ್; 7 ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 255 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,92,276ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 255 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,92,276ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಏಳು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,153ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 163 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,54,256ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 667 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,46,601ಕ್ಕೆ ಏರಿಕೆಯಾಗಿದೆ. ಇನ್ನು 7,493 ಸಕ್ರೀಯ ಪ್ರಕರಣಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2nd PUC exam 2026-ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ-1: 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ, ಸಾವಿರಕ್ಕೂ ಅಧಿಕ ಮಕ್ಕಳಿಗೆ ನಿರಾಕರಣೆ

Bolivia ರಾಜಧಾನಿ ಸಮೀಪ ಕಾರ್ಗೊ ವಿಮಾನ ಪತನ: ಕನಿಷ್ಠ 15 ಮಂದಿ ಸಾವು-Video

ಅಹಿಂದ ಉತ್ತರಾಧಿಕಾರಕ್ಕೆ ಜಾರಕಿಹೊಳಿ ಸಿದ್ದತೆ: ಹಿಂದುಳಿದ ವರ್ಗಗಳ ಚ್ಯಾಂಪಿಯನ್ ಪಟ್ಟಕ್ಕೆ 'ಸಾಹುಕಾರ್' ಸಮರ್ಥರೇ?

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಯಾವ ಶಕ್ತಿ ಪ್ರದರ್ಶನವೂ ಇಲ್ಲ; ಡಿ.ಕೆ. ಶಿವಕುಮಾರ್

ಇಂದು ದೆಹಲಿಯಲ್ಲಿ ಚುನಾವಣೆ ನಡೆಸಿ... BJP 10 ಸ್ಥಾನ ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ: ಕೇಜ್ರಿವಾಲ್ ಸವಾಲು

SCROLL FOR NEXT