ಪ್ರತಾಪ್ ಸಿಂಹ 
ರಾಜ್ಯ

ಮುಸ್ಲಿಮರನ್ನು ಮನೆಗೆ ಕರೆಸಿ ಹಂದಿ ಮಾಂಸ ಮಾಡಿ ಬಡಿಸಿ ನೋಡೋಣ: ಹಂಸಲೇಖ ವಿರುದ್ಧ ಪ್ರತಾಪ್ ಸಿಂಹ ಕಿಡಿ

ಪೇಜಾವರ ಶ್ರೀಗಳ ಬಗ್ಗೆ ನಾದಬ್ರಹ್ಮ ಹಂಸಲೇಖ ವಿವಾದಾತ್ಮವಾಗಿ ಮಾತನಾಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಂಸಲೇಖ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

ಮೈಸೂರು: ಪೇಜಾವರ ಶ್ರೀಗಳ ಬಗ್ಗೆ ನಾದಬ್ರಹ್ಮ ಹಂಸಲೇಖ ವಿವಾದಾತ್ಮವಾಗಿ ಮಾತನಾಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಂಸಲೇಖ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

ಉಡುಪಿಯ ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖರವರು ಪರಿಜ್ಞಾನದಿಂದ ಮಾತನಾಡಬೇಕಿತ್ತು. ಜನಾಭಿಪ್ರಾಯದ ವಿರುದ್ಧ ಮಾತನಾಡಿ ನಂತರ ಕ್ಷಮೆಯಾಚಿಸುವ ಚಾಳಿ ಹೆಚ್ಚಾಗಿದೆ," ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಪೇಜಾವರ ಶ್ರೀಗಳು ಕೇವಲ ಒಂದು ಜಾತಿಯ ಸಂತರು‌ ಅಲ್ಲ. ಅವರು ರಾಮ ಜನ್ಮಭೂಮಿಯ ಉಳಿವಿಗಾಗಿ ಹೋರಾಟ ಮಾಡಿದವರು. ದಲಿತ ಕೇರಿಗಳಿಗೆ ತೆರಳಿ ಒಗ್ಗಟ್ಟಿನ ಮನೋಭಾವದಲ್ಲಿ ಸಂಘಟನೆ ಮಾಡುತ್ತಿದ್ದವರು," ಎಂದರು.ಇದನ್ನೂ ಓದಿ:

ಪೇಜಾವರ ಶ್ರೀಗಳು ಬೇರೆ ರೀತಿಯ ಜಾತಿ ಸ್ವಾಮೀಜಿ ರೀತಿ ಅಲ್ಲ. ಕರ್ಮಠ ವ್ಯವಸ್ಥೆಯನ್ನು ಮೀರಿ ಸಮಾನತೆ ಸಾರಿದವರು ಪೇಜಾವರ ಶ್ರೀಗಳು. ಸಾಧು-ಸಂತರ ಆಹಾರ ಪದ್ಧತಿ ಸಸ್ಯಾಹಾರ. ಮನಸ್ಸಿನ ತಾರತಮ್ಯ ತೆಗೆದು ಹಾಕಲು ಶ್ರೀಗಳು ಹೋಗಿದ್ದರೆ ಹೊರತು ಆಹಾರ ಪದ್ಧತಿಯ ಸಮಾನತೆಗೆ ಅಲ್ಲ.

ನಿಮ್ಮ ಮನೆಗೆ ಮುಸ್ಲಿಂ ಸ್ನೇಹಿತರನ್ನು ಕರೆಯಿರಿ. ಅವರಿಗೆ ಹಂದಿ ಮಾಂಸದ ಊಟ ಹಾಕಿ. ಅವರು ತಿನ್ನುತ್ತಾರಾ ನೋಡಿ? ಮುಸ್ಲಿಂ ಧರ್ಮದಲ್ಲಿ ಹಂದಿ ಮಾಂಸ ತಿನ್ನುವುದು ನಿಷೇಧ. ಅದಕ್ಕೆ ಅವರು ತಿನ್ನುವುದಿಲ್ಲ. ಆಗ ಅದನ್ನು ತಪ್ಪು ಎನ್ನುತ್ತೀರಾ? ಪ್ರಗತಿಪರ ಎನ್ನಿಸಿಕೊಳ್ಳುವ ಗೀಳಿಗೆ ಬಿದ್ದು, ಪ್ರಚಾರಕ್ಕಾಗಿ ಹೀಗೆ ಮಾತಾಡುತ್ತಿದ್ದಾರೆ," ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT