ರಾಜ್ಯ

ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಇಂದು 8 ಸಾವು, ಬೆಂಗಳೂರಿನಲ್ಲಿ 207 ಸೇರಿ 308 ಮಂದಿಗೆ ಪಾಸಿಟಿವ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 308 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,92,584ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ 8 ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38161ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 207 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,54,463ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 384 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,46,985ಕ್ಕೆ ಏರಿಕೆಯಾಗಿದೆ. ಇನ್ನು 7409 ಸಕ್ರೀಯ ಪ್ರಕರಣಗಳಿವೆ.

SCROLL FOR NEXT