ವೆಂಕಯ್ಯ ನಾಯ್ಡು 
ರಾಜ್ಯ

ಬೆಂಗಳೂರು ತಂತ್ರಜ್ಞಾನ ಶೃಂಗ ಸಮಾವೇಶಕ್ಕೆ ಇಂದು ವೆಂಕಯ್ಯ ನಾಯ್ಡು ಚಾಲನೆ: ನವೆಂಬರ್ 18ಕ್ಕೆ ಮೋದಿ ಭಾಷಣ

ನಗರದ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಹೈಬ್ರಿಡ್‌ ಮಾದರಿಯಲ್ಲಿ ಮುಂದಿನ ಮೂರು ದಿನಗಳ ಕಾಲ ನಡೆಯಲಿರುವ ಈ ಸಮಾವೇಶಕ್ಕೆ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡುಚಾಲನೆ ನೀಡಲಿದ್ದಾರೆ.

ಬೆಂಗಳೂರು: ಬಹು ನಿರೀಕ್ಷಿತ ಬೆಂಗಳೂರು ತಂತ್ರಜ್ಞಾನ ಶೃಂಗದ 24ನೇ ವರ್ಷದ ಸಮಾವೇಶ ಇಂದಿನಿಂದ  ಆರಂಭವಾಗಲಿದೆ. ನಗರದ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಹೈಬ್ರಿಡ್‌ ಮಾದರಿಯಲ್ಲಿ ಮುಂದಿನ ಮೂರು ದಿನಗಳ ಕಾಲ ನಡೆಯಲಿರುವ ಈ ಸಮಾವೇಶಕ್ಕೆ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡುಚಾಲನೆ ನೀಡಲಿದ್ದಾರೆ.

‘ಡ್ರೈವಿಂಗ್‌ ದಿ ನೆಕ್ಸ್ಟ್‌’ ಘೋಷ ವಾಕ್ಯದಡಿ ನಡೆಯಲಿರುವ ಬಿಟಿಎಸ್‌-2021ರಲ್ಲಿ 30ಕ್ಕೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ. ಯುಎಇ , ಐರೋಪ್ಯ ಒಕ್ಕೂಟ, ವಿಯೆಟ್ನಾಂ ಮತ್ತು ದಕ್ಷಿಣ ಆಫ್ರಿಕಾ ಇದೇ ಮೊದಲ ಬಾರಿಗೆ ಪಾಲ್ಗೊಳ್ಳುತ್ತಿದ್ದು, ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನಟ್‌ ಮತ್ತು ಆಸ್ಪ್ರೇಲಿಯಾದ ಪ್ರಧಾನಿ ಸ್ಕಾಟ್‌ ಮಾರಿಸನ್‌ ಸೇರಿದಂತೆ ಹಲವು ಗಣ್ಯರು ವರ್ಚುವಲ್  ರೂಪದಲ್ಲಿ ಭಾಗವಹಿಸಲಿದ್ದಾರೆ.

ಜಾಗತಿಕ ಮಟ್ಟದ 300ಕ್ಕೂ ಹೆಚ್ಚು ಕಂಪನಿಗಳು ಮತ್ತು 5 ಸಾವಿರಕ್ಕೂ ಹೆಚ್ಚು ನವೋದ್ಯಮಗಳು, ವಾಣಿಜ್ಯ ವಲಯದ 20 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು ವರ್ಚುವಲ್ ರೂಪದಲ್ಲಿ 5 ಲಕ್ಷಕ್ಕೂ ಹೆಚ್ಚು ಆಸಕ್ತರು ಈ ಶೃಂಗದಲ್ಲಿ ಭಾಗವಹಿಸಲಿದ್ದಾರೆ ಎಂದು ಐಟಿ-ಬಿಟಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಮೊದಲ ಬಾರಿಗೆ ಭಾರತೀಯ ನಾವೀನ್ಯತಾ ಮೈತ್ರಿಕೂಟ (ಜಿಐಎ) ಎಂಬ ಪರಿಕಲ್ಪನೆ ಅಳವಡಿಸಿಕೊಳ್ಳಲಾಗಿದ್ದು, ಇದರ ಭಾಗವಾಗಿ ಜರ್ಮನಿ, ಜಪಾನ್‌, ಫಿನ್ಲೆಂಡ್‌, ಲಿಥುವೇನಿಯಾ, ಸ್ವೀಡನ್‌, ಸ್ವಿಜರ್ಲೆಂಡ್‌ ಮುಂತಾದ ದೇಶಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗುತ್ತದೆ. ಬಿಟಿಎಸ್‌-2021ರ ಅಂಗವಾಗಿ ನಾಲ್ಕು ವೇದಿಕೆಗಳಲ್ಲಿ ಒಟ್ಟು 75 ಗೋಷ್ಠಿಗಳನ್ನು ಮತ್ತು 7 ಸಂವಾದಗಳನ್ನು ಏರ್ಪಡಿಸಲಾಗಿದೆ.

ಇವುಗಳಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರಗಳ (ಜಿಸಿಸಿ) ಮೂಲಕ ನಾವೀನ್ಯತೆಯ ಬೆಳವಣಿಗೆ, ಫಿನ್‌ಟೆಕ್‌ ಭವಿಷ್ಯದ ಹೆಜ್ಜೆಗಳು, ಕೃಷಿ, ಜೀವವಿಜ್ಞಾನ ಸಂಶೋಧನೆ, ಮಹಿಳಾ ಉದ್ಯಮಶೀಲತೆಯ ಸವಾಲುಗಳು, ಶೈಕ್ಷಣಿಕ ತಂತ್ರಜ್ಞಾನ, ಮುಂದಿನ ತಲೆಮಾರಿನ ವೈದ್ಯಕೀಯ ತಂತ್ರಜ್ಞಾನ, ವಂಶವಾಹಿ ಆಧಾರಿತ ಔಷಧಿಗಳು, ಜೀನ್‌ ಎಡಿಟಿಂಗ್‌, ಸೆಮಿಕಂಡಕ್ಟರ್‌, ಕ್ಯಾನ್ಸರ್‌ ಚಿಕಿತ್ಸೆ, , ಸೈಬರ್‌ ಸೆಕ್ಯುರಿಟಿ,  ಮುಂತಾದ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ.

ಇನ್ನೂ ಜನ ಸಾಮಾನ್ಯರು ಕೂಡ ಈ ಸಮಾವೇಶದಲ್ಲಿ ವರ್ಚ್ಯೂವಲ್ ಆಗಿ ಭಾಗವಹಿಸಬಹುದಾಗಿದೆ,  ಭಾಗವಹಿಸಲು ಆಸಕ್ತಿ ಉಳ್ಳವರು https://www.bengalurutechsummit.com/web/it_forms/registration-conference.php ಈ ಲಿಂಕ್ ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT