ಹೈಕೋರ್ಟ್ 
ರಾಜ್ಯ

ಕೊಲ್ಲೂರು ದೇವಾಲಯದ ಅಧ್ಯಕ್ಷರ ಆಯ್ಕೆ ಅಸಿಂಧು: ಹೈಕೋರ್ಟ್

ಕೊಲ್ಲೂರಿನ ಪ್ರಸಿದ್ಧ ಶ್ರೀ ಮೂಕಾಂಬಿಕಾ ದೇವಾಲಯದ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಅವರ ನೇಮಕವನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ. 

ಬೆಂಗಳೂರು: ಕೊಲ್ಲೂರಿನ ಪ್ರಸಿದ್ಧ ಶ್ರೀ ಮೂಕಾಂಬಿಕಾ ದೇವಾಲಯದ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಅವರ ನೇಮಕವನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ. 

ನ್ಯಾ. ಕೃಷ್ಣ ಎಸ್ ದೀಕ್ಷಿತ್ ಏ.26, 2021 ರ ಪ್ರಕ್ರಿಯೆಗಳನ್ನು ರದ್ದುಗೊಳಿಸಿದ್ದಾರೆ. ಈ ಪ್ರಕ್ರಿಯೆಯ ಮೂಲಕ ಶೆಟ್ಟಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. 

ಉಡುಪಿ ಜಿಲ್ಲೆಯ ಗೋಪಾಲಕೃಷ್ಣ ಹಾಗೂ ಮೂವರು ಚಂದ್ರಶೇಖರ್ ಶೆಟ್ಟಿ ಅವರ ಆಯ್ಕೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. 

ಗಣೇಶ್ ಕಿಣಿ ಹಾಗೂ ಚಂದ್ರಶೇಖರ ಶೆಟ್ಟಿ ಅವರು ಮಾ.24 ಹಾಗೂ ಏಪ್ರಿಲ್, 15, 2021 ರಲ್ಲಿ ಸಮಿತಿ ಸದಸ್ಯರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಹೊರತಾಗಿಯೂ ಅವರನ್ನು ಹಾಲಿ ಸಮಿತಿ ಸದಸ್ಯರೆಂದು ಪರಿಗಣಿಸಿ ಏ.26 ರಂದು ನಡೆದ ಸಭೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದ್ದು ಈ ಸಭೆಯಲ್ಲಿ ಶೆಟ್ಟಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಲಾಗಿತ್ತು. 

ಸಮಿತಿಯ ಸದಸ್ಯರೇ ಅಲ್ಲದೇ ಇದ್ದವರು ಸಭೆಯಲ್ಲಿ ಭಾಗವಹಿಸಲು ಸಾಧ್ಯವಿಲ್ಲ. ಆದ್ದರಿಂದ ಸಮಿತಿಯ ಸದಸ್ಯರಲ್ಲದೇ ಇದ್ದವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವಂತಿಲ್ಲ ಎಂದು ಕೋರ್ಟ್ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!