ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ 
ರಾಜ್ಯ

ದತ್ತಮಾಲಾಧಾರಿಗಳಿದ್ದ ಬಸ್ ಮೇಲೆ‌ ಕಲ್ಲು ತೂರಾಟ ಖಂಡಿಸಿ ಕೋಲಾರ ಬಂದ್‌ ಯಶಸ್ವಿ, ಪ್ರಮೋದ್‌ ಮುತಾಲಿಕ್‌ ಪೊಲೀಸ್‌ ವಶಕ್ಕೆ‌

ದತ್ತ ಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ಖಂಡಿಸಿ ಗುರುವಾರ ವಿವಿಧ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಕೋಲಾರ ಬಂದ್ ಯಶಸ್ವಿಯಾಗಿದೆ.

ಕೋಲಾರ: ದತ್ತ ಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ಖಂಡಿಸಿ ಗುರುವಾರ ವಿವಿಧ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಕೋಲಾರ ಬಂದ್ ಯಶಸ್ವಿಯಾಗಿದೆ.

ಕಳೆದ ಶನಿವಾರ ದತ್ತಮಾಲಾಧಾರಿಗಳು ಚಿಕ್ಕಮಗಳೂರಿನತ್ತ ಭಜನೆಯೊಂದಿಗೆ ಸಾಗುತ್ತಿದ್ದಾಗ ಕೆಲ ಕಿಡಿಗೇಡಿಗಳು ಕಲ್ಲು ತೂರಿದ್ದರು. ಇದನ್ನು ಖಂಡಿಸಿ ಭಜರಂಗದಳ, ಶ್ರೀರಾಮ ಸೇನೆ ಸೇರಿದಂತೆ ಹಿಂದೂ ಸಂಘಟನೆಗಳು ಕರೆ ನೀಡಿದ್ದ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಲ್ಲಾ ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದವು. ಖಾಸಗಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಸಂಪೂರ್ಣ ಸ್ತಬ್ಧವಾಗಿತ್ತು.

ಬಂದ್ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರ್ ಬಾಬು ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಪ್ರತಿಭಟನಾಕಾರರು ನಗರದ ಪ್ರಮುಖ ವೃತ್ತಗಳಲ್ಲಿ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು.

ಈ ನಡುವೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗಮನದ ವಿಚಾರ ತಿಳಿದ ಕೋಲಾರ ಜಿಲ್ಲಾಧಿಕಾರಿ ಬುಧವಾರ ಅವರ ಪ್ರವೇಶಕ್ಕೆ ನಿಷೇಧ ಹೇರಿದ್ದರು. ಆದರೂ ಕೋಲಾರ ಪ್ರವೇಶಿಸಲು ಯತ್ನಿಸಿದ ಮುತಾಲಿಕ್ ಅವರನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ