ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರು: ಮಳೆಯಿಂದ ಭೀಕರ ಅಪಘಾತ, ಮೂವರು ದುರ್ಮರಣ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಬೆಟ್ಟ ಹಲಸೂರು ಕ್ರಾಸ್ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ.

ಸಾಂದರ್ಭಿಕ ಚಿತ್ರ
Nagaraja AB
Updated On : 19 Nov 2021, 12:23 am

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಬೆಟ್ಟ ಹಲಸೂರು ಕ್ರಾಸ್ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಭಾರೀ ಮಳೆಯಿಂದಾಗಿ ರಸ್ತೆ ಕಾಣದೆ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ನಂತರ ಎದುರುಗಡೆ ಬರುತ್ತಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. 

ಡಿಕ್ಕಿಯ ರಭಸಕ್ಕೆ ಕೆಳಗಡೆ ಸಿಕ್ಕಿದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಮತ್ತೊಂದು ಕಾರಿನ ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಕೆಳಗಡೆ ಸಿಲುಕಿದ ಕಾರಿನಲ್ಲಿದ್ದ ಇಬ್ಬರು ಹೆಂಗಸರು ಹಾಗೂ ಒಬ್ಬ ಗಂಡಸು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಸಂಬಂಧ ಚಿಕ್ಕಜಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement