ಬಿಸಿ ಪಾಟೀಲ್ 
ರಾಜ್ಯ

ಕೆಲ ವರ್ಗದವರಿಗೆ ಅರ್ಥ ಮಾಡಿಸಲಾಗದೆ 3 ಕೃಷಿ ಮಸೂದೆಗಳ ರದ್ದುಪಡಿಸಲಾಗಿದೆ: ರಾಜ್ಯ ಕೃಷಿ ಸಚಿವ

ಕೆಲ ವರ್ಗದವರಿಗೆ ಅರ್ಥ ಮಾಡಿಸಲು ಸಾಧ್ಯವಾಗದೆ 3 ಕೃಷಿ ಮಸೂದೆಗಳ ರದ್ದುಪಡಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ಕೆಲ ವರ್ಗದವರಿಗೆ ಅರ್ಥ ಮಾಡಿಸಲು ಸಾಧ್ಯವಾಗದೆ 3 ಕೃಷಿ ಮಸೂದೆಗಳ ರದ್ದುಪಡಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಬೆಳಿಗ್ಗೆ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿಯವರು, 3 ಕೃಷಿ ಮಸೂದೆಗಳ ರದ್ದುಪಡಿಸುವುದಾಗಿ ಘೋಷಣೆ ಮಾಡಿದ್ದರು.

ಕೇಂದ್ರ ಸರ್ಕಾರ ಈ ನಿರ್ಧಾರ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿ.ಸಿ.ಪಾಟೀಲ್ ಅವರು, ನೂತನ ಮೂರು ಕೃಷಿ ಕಾನೂನುಗಳ ಉದ್ದೇಶಗಳನ್ನು ಕೆಲವು ವರ್ಗದವರಿಗೆ ಅರ್ಥ ಮಾಡಿಸಲು ಸಾಧ್ಯವಾಗದೇ ಇರುವುದರಿಂದ ಕೇಂದ್ರ ಸರ್ಕಾರ ಅವುಗಳನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ರೈತರಿಗೆ ಸಮಂಜಸವಾದ ದರದಲ್ಲಿ ಬಿತ್ತನೆ ಬೀಜಗಳನ್ನು ಒದಗಿಸಲು ಮತ್ತು ಸೂಕ್ಷ್ಮ ನೀರಾವರಿ, 22 ಕೋಟಿ ಮಣ್ಣಿನ ಆರೋಗ್ಯ ಕಾರ್ಡ್‌ಗಳಂತಹ ಸೌಲಭ್ಯಗಳನ್ನು ಒದಗಿಸಲು ನಾವು ಕೆಲಸ ಮಾಡಿದ್ದೇವೆ. ಇಂತಹ ಅಂಶಗಳು ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಕಾರಣವಾಗಿವೆ. ಆದರೂ ನೂತನ ಕೃಷಿ ಕಾಯಿದೆಗಳು ಎಲ್ಲರಿಗೂ ಸಮ್ಮತವಾಗದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅವುಗಳನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SCROLL FOR NEXT