ಸಾಂದರ್ಭಿಕ ಚಿತ್ರ 
ರಾಜ್ಯ

ಚಿತ್ರದುರ್ಗ: ಮಳೆಯಿಂದ ಗೋಡೆ ಕುಸಿದು ಮೂವರು ದುರ್ಮರಣ

ಗುರುವಾರದಿಂದ ಎಡೆಬಿಡದೆ ಸುರಿಯುತ್ತಿರುವ  ಮಳೆಯಿಂದಾಗಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಗೋಡೆ ಕುಸಿದು ದಂಪತಿ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ.

ಚಿತ್ರದುರ್ಗ: ಗುರುವಾರದಿಂದ ಎಡೆಬಿಡದೆ ಸುರಿಯುತ್ತಿರುವ  ಮಳೆಯಿಂದಾಗಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಗೋಡೆ ಕುಸಿದು ದಂಪತಿ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ. ಮೃತರನ್ನು ನಾಯಕನಹಟ್ಟಿಯ  ಕಂಪ್ಲೇಶಪ್ಪ(45), ಪತ್ನಿ ತಿಪ್ಪಮ್ಮ(38) ಮತ್ತು ಬ್ಯಾಡರಹಳ್ಳಿಯ ತ್ರಿವೇಣಿ (25) ಎಂದು ಗುರುತಿಸಲಾಗಿದೆ.

ನಾಯಕನಹಟ್ಟಿಯ ಅಂಬೇಡ್ಕರ್ ಕಾಲೋನಿಯಲ್ಲಿ ಗೋಡೆಯೊಂದು ಕುಸಿದು ಬಿದ್ದ ನಂತರ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆ ನಡೆದಾಗ ಅವರು ಗಾಢ ನಿದ್ರೆಯಲ್ಲಿದ್ದರು ಎನ್ನಲಾಗಿದೆ. ಅವರ ಪುತ್ರ ಅರುಣ್ ಕುಮಾರ್ ಬದುಕುಳಿದಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮತ್ತೊಂದು ಘಟನೆಯಲ್ಲಿ ಬ್ಯಾಡರಹಳ್ಳಿಯಲ್ಲಿ ಕೃಷ್ಣಮೂರ್ತಿ ಎಂಬವರಿಗೆ ಸೇರಿದ ಮನೆ ಕುಸಿದು ಅವರ ಪತ್ನಿ ತ್ರಿವೇಣಿ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!